Featured

ಮಂಗಳೂರು : ನಕಲಿ ಚಿನ್ನದ ಬಳೆ ಅಡವಿಟ್ಟು ಲಕ್ಷ ರೂ. ಸಾಲ ; ಮೂವರ ಬಂಧನ – vishwanews24

ಮಂಗಳೂರು : ನಕಲಿ ಚಿನ್ನದ ಬಳೆ ಅಡವಿಟ್ಟು ಲಕ್ಷ ರೂ. ಸಾಲ – ಮೂವರ ಬಂಧನ

ಮಂಗಳೂರು : ಕಾವೂರು ಪರಿಸರದ ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು 14.89 ಲಕ್ಷ ರೂ. ಸಾಲ ಪಡೆದ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್‌ ನಝೀರ್‌, ಜಮಾಲುದ್ದೀನ್‌ ಎ.ಎಚ್‌. ಮತ್ತು ಸೈನಾಝ್‌ ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ದಿಲ್ಶಾದ್‌ ತಲೆಮರೆಸಿಕೊಂಡಿದ್ದಾಳೆ.

ಈ ನಾಲ್ವರು ಆರೋಪಿಗಳು 2024ರ ಜೂ.24ರಿಂದ 2024ರ ಅ.5ವರೆಗೆ ಸುಮಾರು 14.89ಲಕ್ಷ ರೂ. ಮೌಲ್ಯದ ಬಳೆಗಳನ್ನು ಅಡವಿಟ್ಟಿದ್ದರು. ಬ್ಯಾಂಕಿನ ಚಿನ್ನಾಭರಣ ಪರೀಕ್ಷಕರು ಅಸಲಿ ಎಂದು ದೃಢೀಕರಿಸಿದ ಬಳಿಕ ಚಿನ್ನಾಭರಣದ ಪರೀಕ್ಷಕರು ನೀಡಿದ ಆಧಾರದ ಮೇಲೆಯೇ ಸಾಲ ನೀಡಲಾಗಿತ್ತು. 2025 ಜು.7ರಂದು ಸದಸ್ಯರು ಅಡವಿಟ್ಟ ಚಿನ್ನವನ್ನು ವಾರ್ಷಿಕವಾಗಿ ಪರೀಕ್ಷಿಸಲು ಪರೀಕ್ಷಕರನ್ನು ಕರೆಸಿದಾಗ ಮೊಹಮ್ಮದ್‌ ನಝೀರ್‌, ಜಮಾಲುದ್ದೀನ್‌ ಹಾಗೂ ದಿಲ್‌ಶಾದ್‌ ಅಡವಿಟ್ಟ ಬಳೆಗಳೆಲ್ಲವೂ ನಕಲಿ ಎಂದು ತಿಳಿದು ಬಂದಿದೆ. ಈ ಬಗ್ಗೆ ಆರೋಪಿಗಳಲ್ಲಿ ವಿಚಾರಿಸಿದಾಗ ಹಣ ಕಟ್ಟುವುದಾಗಿ ತಿಳಿಸಿದ್ದರು. ಆದರೆ ಈ ವರೆಗೆ ಹಣ ಕಟ್ಟಿಲ್ಲ.

ಆರೋಪಿಗಳು ಜಾಲವೊಂದನ್ನು ರಚಿಸಿ ಮೋಸ ಮಾಡುವ ಉದ್ದೇಶದಿಂದಲೇ ನಕಲಿ ಚಿನ್ನವನ್ನು ಅಡವಿಟ್ಟು ಸಾಲ ಪಡೆದಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಾದ ಮೊಹಮ್ಮದ್‌ ನಝೀರ್‌, ಜಮಾಲುದ್ದೀನ್‌ ಎ.ಎಚ್‌., ದಿಲ್‌ಶಾದ್‌ ಹಾಗೂ ನಕಲಿ ಚಿನ್ನ ಅಡಮಾನ ಇರಿಸಲು ಬಂದಿದ್ದ ಸೈನಾಝ್‌ ವಿರುದ್ಧ ಸಹಕಾರಿ ಸಂಘದ ಮೆನೇಜರ್‌ ದೂರು ನೀಡಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

9 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

9 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

10 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

10 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

11 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

11 hours ago