ಉಡುಪಿ: ಮುಂದಿನ 5 ವರ್ಷಗಳಲ್ಲಿ ಕ್ಷೇತ್ರದ ಆರ್ಥಿಕ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ರಾಜ್ಯ ಹಾಗೂ ಕೇಂದ್ರ ಸರಕಾರದ ಮೂಲಕ ಅನುಷ್ಠಾನಗೊಳಿಸಿ ರಾಜ್ಯದಲ್ಲಿ ಬೆಂಗಳೂರು, ಮಂಗಳೂರು ನಗರದಂತೆಯೇ ಉಡುಪಿಯನ್ನು ರಾಜ್ಯದ ಆರ್ಥಿಕ ನಗರಿಯಾಗಿಸುವ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಲು ಬದ್ಧರಾಗಿರುವುದಾಗಿ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ಹೇಳಿದರು.
ಉಡುಪಿ ನಗರ ವ್ಯಾಪ್ತಿಯ ವಿವಿಧ ವಾರ್ಡ್ ಹಾಗೂ ಗ್ರಾಮಾಂತರ ಭಾಗದ ವಿವಿಧೆಡೆ ಕಾರ್ಯಕರ್ತರೊಂದಿಗೆ ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಉಡುಪಿ ಕ್ಷೇತ್ರ ಈಗಾಗಲೇ ಮೀನುಗಾರಿಕೆ, ಮೂರ್ತೆದಾರಿಕೆ, ಕೃಷಿ, ವೈದ್ಯಕೀಯ, ಬ್ಯಾಂಕಿಂಗ್, ಶಿಕ್ಷಣ, ಪ್ರವಾಸೋದ್ಯಮ, ಐಟಿ ಹಾಗೂ ಕೈಗಾರಿಕೆಗಳ ಮೂಲಕ ಜಿಲ್ಲೆಯ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸಿದೆ.
ದೇಶದಲ್ಲಿಯೇ ಪ್ರಸಿದ್ಧವಾದ ಮಲ್ಪೆಯ ಸರ್ವಋತು ಬಂದರಿನ ಮೂಲಕ ಸಹಸ್ರಾರು ಮಂದಿ ಉದ್ಯೋಗ, ವ್ಯವಹಾರದ ಮೂಲಕ ಜೀವನ ನಡೆಸಿಕೊಂಡು ಬರುತ್ತಿದ್ದು, ಮಲ್ಪೆ ಬಂದರಿನ ಸಮಗ್ರ ಅಭಿವೃದ್ಧಿಗೆ ನೀಲ ನಕಾಶೆ ರೂಪಿಸಿ, ಅಂತರಾಷ್ಟ್ರೀಯ ದರ್ಜೆಯ ರಫು¤ ವಲಯ ಹಾಗೂ ಪ್ರತ್ಯೇಕ ಮೀನುಗಾರಿಕಾ ಕೈಗಾರಿಕಾ ವಲಯ ಸ್ಥಾಪಿಸಿ ಮೀನುಗಾರಿಕೆಗೆ ಸಂಬಂಧಿಸಿದ ಕೈಗಾರಿಕೆಯ ಮೂಲಕ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಆದ್ಯತೆಯೊಂದಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದರು.
ಶಿಕ್ಷಣ, ವೈದ್ಯಕೀಯ, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಮಣಿಪಾಲದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಗೊಳಿಸಿ ಆರ್ಥಿಕತೆಯ ಉತ್ತೇಜನಕ್ಕೆ ಪೂರಕ ಕ್ರಮ, ಬೀಚ್ ಹಾಗೂ ಟೆಂಪಲ್ ಟೂರಿಸಂ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು ಪ್ರವಾಸೋದ್ಯಮದ ಮೂಲಕ ಸ್ಥಳೀಯರಿಗೆ ಸ್ವದ್ಯೋಗಕ್ಕೆ ಅವಕಾಶ ಕಲ್ಪಿಸುವ ಜತೆಜತೆಗೆ ಶೈಕ್ಷಣಿಕವಾಗಿ ಪ್ರತಿಭಾವಂತ ಯುವ ಜನತೆಗೆ ಐಟಿ ಕಂಪೆನಿಗಳ ಸ್ಥಾಪನೆಗಾಗಿ ಪೂರಕ ಸೌಲಭ್ಯಗಳನ್ನು ಒಳಗೊಂಡ ಐಟಿ ಪಾರ್ಕ್ ನಿರ್ಮಾಣದ ಮೂಲಕ ತಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಸೃಷ್ಟಿಸಿ ಉಡುಪಿಯನ್ನು ಕರಾವಳಿ ಭಾಗದ ಐಟಿ ಹಬ್ ಆಗಿ ರೂಪಿಸುವ ಕನಸು ಹೊಂದಿದೆ ಎಂದರು.
ಮೀನುಗಾರಿಕೆ ಮತ್ತು ಕೃಷಿ ಕ್ಷೇತ್ರದಂತೆಯೇ ಹೈನುಗಾರಿಕೆ, ನೇಕಾರರು, ಮೂರ್ತೆದಾರರು, ಕರಕುಶಲಕರ್ಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ವತಿಯಿಂದ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಿ ಆರ್ಥಿಕ ಚೈತನ್ಯ ತುಂಬುವ ಮೂಲಕ ಸ್ವಾವಲಂಬಿ ಬದುಕಿಗೆ ಅವಕಾಶ ಕಲ್ಪಿಸುವುದು.
ವೀರ ಸಾವರ್ಕರ್ ಪುತ್ಥಳಿ ನಿರ್ಮಾಣ:
ಸ್ವಾತಂತ್ರ್ಯಕ್ಕಾಗಿ ಕೆಚ್ಚೆದೆಯ ಹೋರಾಟ ನಡೆಸಿ ಇಂದಿಗೂ ಯುವಜನತೆಗೆ ಸ್ಪೂರ್ತಿಯಾಗಿರುವ ವೀರ ಸಾವರ್ಕರ್ ಪುತ್ಥಳಿ ನಿರ್ಮಾಣ, ದ್ವೈತ ಮತ ಪ್ರತಿಪಾದಕ ಮಧ್ವಾಚಾರ್ಯ, ಮಾಧವ ಮಂಗಲ ಪೂಜಾರ್ಯರು, ಬ್ರಹ್ಮಶ್ರೀ ನಾರಾಯಣಗುರು, ಅಂಬೇಡ್ಕರ್, ವಾಲ್ಮೀಕಿ, ವೇದವ್ಯಾಸರು, ಜಕಣಾಚಾರ್ಯ, ವಿಶ್ವೇಶತೀರ್ಥ ಶ್ರೀಪಾದರು, ಮಲ್ಪೆ ಮಧ್ವರಾಜ್, ಟಿ. ಎಂ. ಎ. ಪೈ, ಸಹಕಾರಿ ಪಿತಾಮಹಾ ಮೊಳಹಳ್ಳಿ ಶಿವರಾಯ, ಕರಂಬಳ್ಳಿ ಸಂಜೀವ ಶೆಟ್ಟಿ, ಡಾ| ವಿ. ಎಸ್. ಆಚಾರ್ಯ ಮೊದಲಾದ ಮಹನೀಯರ ಜೀವನದ ಯಶೋಗಾಥೆಯ ಅಧ್ಯಯನ ಕೇಂದ್ರವಾಗಿ ಕರಾವಳಿ ಥೀಂ ಪಾರ್ಕ್ ನಿರ್ಮಾಣ ಹಾಗೂ ಜಿಲ್ಲೆಯ ಸಹಕಾರಿ ಕ್ಷೇತ್ರದ ಬಲವರ್ಧನೆಗಾಗಿ ಜಿಲ್ಲಾಧಿಕಾರಿ ಕಚೇರಿ ಮಾದರಿಯಲ್ಲಿ ಸಹಕಾರಿ ಇಲಾಖೆಗೆ ಸಂಬಂಧಿಸಿದ ಎಲ್ಲಾ ಕಚೇರಿಗಳನ್ನೊಳಗೊಂಡ ಸಹಕಾರಿ ಸೌಧ ನಿರ್ಮಾಣದ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯದ ಡಬಲ್ ಇಂಜಿನ್ ಸರಕಾರದ ಮೂಲಕ ಕಾರ್ಯಗತಗೊಳಿಸುವ ಸಂಪೂರ್ಣ ವಿಶ್ವಾಸ ಇದೆ ಎಂದರು.
ಗರೋಡಿ ಮಂದಿರಗಳ ಅಭಿವೃದ್ಧಿಗೆ ವಿಶೇಷ ಅನುದಾನ:
ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಡಬಲ್ ಇಂಜಿನ್ ಮಾದರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕಟ್ಟಿಬದ್ಧವಾಗಿದೆ. ಬಿಲ್ಲವ, ಈಡಿಗ ಸಹಿತ 26 ಉಪಜಾತಿಗಳ ಶ್ರೇಯೋಭಿವೃದ್ಧಿಗಾಗಿ ಬಹುದಶಕಗಳ ಬೇಡಿಕೆಯಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಆರಂಭಿಸುವ ಮೂಲಕ ನುಡಿದಂತೆ ನಡೆವ ಬಿಜೆಪಿ ಸರಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ನಾರಾಯಣಗುರು ವಸತಿ ಶಾಲೆ, ಕೇಂದ್ರ ಸರಕಾರದ ಅಗ್ನಿವೀರ್ ಯೋಜನೆಗಾಗಿ ಸೈನಿಕ ಪೂರ್ವ ತರಬೇತಿ ನೀಡಲು ಉಡುಪಿಯಲ್ಲಿ ಕೋಟಿ ಚೆನ್ನಯ ತರಬೇತಿ ಶಾಲೆ ಹಾಗೂ ಗರೋಡಿ ಮಂದಿರಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಪರ ಸರಕಾರ ಬದ್ಧತೆ ಮೆರೆದಿದೆ. ಸರಕಾರದ ಈ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಹತಾಶ ಕಾಂಗ್ರೆಸಿಗರ ಅಪಪ್ರಚಾರಕ್ಕೆ ಕಿವಿ ಕೊಡದೇ ಪ್ರಜ್ಞಾವಂತ ಬಿಲ್ಲವ ಸಮುದಾಯ ಬಿಜೆಪಿ ಸರಕಾರದಿಂದಾದ ಲಾಭಗಳ ಬಗ್ಗೆ ಅರಿತುಕೊಂಡಿದ್ದಾರೆ ರಾಜ್ಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…