ಮಂಗಳೂರು: ‘ನಗರದ ಅತ್ಯಂತ ಪುರಾತನ ದೇವಸ್ಥಾನವಾದ ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂಪಾಯಿ ಮಂಜೂರಾಗಿದೆ’ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.
ಈ ಕುರಿತು ಮಾತಾನಾಡಿದ ಅವರು, ‘2019-20 ನೇ ಸಾಲಿನ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರವಾಸಿ ಸ್ಥಳಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ 50 ಲಕ್ಷ ಮಂಜೂರಾಗಿದ್ದು ಅದರಲ್ಲಿ ಪ್ರಸ್ತುತ ಸಾಲಿನಲ್ಲಿ 25 ಲಕ್ಷ ರೂಪಾಯಿಗಳು ಮೊದಲ ಹಂತದಲ್ಲಿ ಶೀಘ್ರವೇ ಬಿಡುಗಡೆಯಾಗಲಿದೆ’ ಎಂದು ಹೇಳಿದರು.
‘ಮಂಗಳೂರನ್ನು ಪ್ರವಾಸಿ ತಾಣವಾಗಿಸಲು ಬೇಕಾಗಿರುವ ಅನುದಾನವನ್ನು ನೀಡುವಲ್ಲಿ ನಮ್ಮ ಪ್ರಯತ್ನಗಳು ನಿರಂತರವಾಗಿ ನಡೆಯಲಿದೆ. ಈಗಾಗಲೇ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ 6 ಕುದ್ರುಗಳು, ಸುಲ್ತಾನ್ ಬತ್ತೇರಿ, ಬೆಂಗರೆ ಪ್ರದೇಶಗಳ ಅಭಿವೃದ್ಧಿಯ ಕುರಿತು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸರಕಾರದೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಲಾಗುವುದು’ ಎಂದು ಶಾಸಕರು ತಿಳಿಸಿದ್ದಾರೆ.
‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಹಾಗೂ ದೇವಾಲಯಗಳು ಸಾಕಷ್ಟು ಇದೆ. ಮಾರಿಗುಡಿ ದೇವಸ್ಥಾನದಂತೆ ಅತೀ ಪುರಾತನ ದೇವಾಲಯಗಳೂ ಕೂಡ ಸಾಕಷ್ಟು ಸಂಖ್ಯೆಯಲ್ಲಿದೆ. ಅವೆಲ್ಲವನ್ನೂ ಕೂಡ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಅಭಿವೃದ್ಧಿಪಡಿಸಲು ಶ್ರಮಿಸುತ್ತೇವೆ’ ಎಂದು ಹೇಳಿದ್ದಾರೆ.
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…