Featured

ಮಂಗಳೂರು: ನಗರದ ಅತ್ಯಂತ ಪುರಾತನ ಉರ್ವ ಮಾರಿಯಮ್ಮ ದೇವಸ್ಥಾನದ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ಮಂಜೂರು : ಶಾಸಕ ಕಾಮತ್ -Vishwanews24

ಮಂಗಳೂರು: ‘ನಗರದ ಅತ್ಯಂತ ಪುರಾತನ ದೇವಸ್ಥಾನವಾದ ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ‌ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂಪಾಯಿ ಮಂಜೂರಾಗಿದೆ’ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.

ಈ ಕುರಿತು ಮಾತಾನಾಡಿದ ಅವರು, ‘2019-20 ನೇ ಸಾಲಿನ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರವಾಸಿ ಸ್ಥಳಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ 50 ಲಕ್ಷ ಮಂಜೂರಾಗಿದ್ದು ಅದರಲ್ಲಿ ಪ್ರಸ್ತುತ ಸಾಲಿನಲ್ಲಿ 25 ಲಕ್ಷ ರೂಪಾಯಿಗಳು ಮೊದಲ ಹಂತದಲ್ಲಿ ಶೀಘ್ರವೇ ಬಿಡುಗಡೆಯಾಗಲಿದೆ’ ಎಂದು ಹೇಳಿದರು.

‘ಮಂಗಳೂರನ್ನು ಪ್ರವಾಸಿ ತಾಣವಾಗಿಸಲು ಬೇಕಾಗಿರುವ ಅನುದಾನವನ್ನು ನೀಡುವಲ್ಲಿ ನಮ್ಮ ಪ್ರಯತ್ನಗಳು ನಿರಂತರವಾಗಿ ನಡೆಯಲಿದೆ. ಈಗಾಗಲೇ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ 6 ಕುದ್ರುಗಳು, ಸುಲ್ತಾನ್ ಬತ್ತೇರಿ, ಬೆಂಗರೆ ಪ್ರದೇಶಗಳ ಅಭಿವೃದ್ಧಿಯ ಕುರಿತು ಚಿಂತನೆ ನಡೆಸಲಾಗಿದೆ. ಈ‌ ಬಗ್ಗೆ ಸರಕಾರದೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಲಾಗುವುದು’ ಎಂದು ಶಾಸಕರು ತಿಳಿಸಿದ್ದಾರೆ.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಹಾಗೂ ದೇವಾಲಯಗಳು ಸಾಕಷ್ಟು ಇದೆ. ಮಾರಿಗುಡಿ ದೇವಸ್ಥಾನದಂತೆ ಅತೀ ಪುರಾತನ ದೇವಾಲಯಗಳೂ ಕೂಡ ಸಾಕಷ್ಟು ಸಂಖ್ಯೆಯಲ್ಲಿದೆ. ಅವೆಲ್ಲವನ್ನೂ ಕೂಡ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಅಭಿವೃದ್ಧಿಪಡಿಸಲು ಶ್ರಮಿಸುತ್ತೇವೆ’ ಎಂದು ಹೇಳಿದ್ದಾರೆ.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 hour ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

2 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

3 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

4 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

4 hours ago