ಮಂಗಳೂರು: ರಾಜ್ಯದಲ್ಲಿ ಬೆಂಗಳೂರು ಬಳಿಕ ಅತೀ ದೊಡ್ಡ ಹಾಗೂ ಶೀಘ್ರ ಗತಿಯಲ್ಲಿ ಬೆಳೆವಣಿಗೆ ಕಾಣುತ್ತಿರುವ ಮಂಗಳೂರು ನಗರದ ಅಭಿವೃದ್ಧಿಗೆ ನಾನು ಮೊದಲ ಆದ್ಯತೆ ನೀಡುತ್ತೇನೆ ಎಂದು ನೂತನ ಮೇಯರ್ ಆಗಿ ಆಯ್ಕೆಯಾದ ಮನೋಜ್ ಕುಮಾರ್ ಕೋಡಿಕಲ್ ಹೇಳಿದರು.
ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು, ಮೊದಲ ಬಾರಿ ಮನಪಾ ಸದಸ್ಯನಾ ಗಿರುವ ನನಗೆ ಮೇಯರ್ ಅವಕಾಶ ಸಿಕ್ಕಿದ್ದು ತುಂಬಾ ಖುಷಿಯಾಗಿದೆ. ಇದಕ್ಕೆ ಪಕ್ಷಕ್ಕೆ, ನಾಯಕರಿಗೆ ನಾನು ಅಭಾರಿಯಾಗಿ ದ್ದೇನೆ. ಈ ಹಿಂದಿನ ನಾಲ್ಕು ಮೇಯರ್‌ಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದು, ಅವರನ್ನು ಮಾದರಿಯಾಗಿಟ್ಟು ಆ ಯೋಜನೆಗಳ ಜತೆ ಮತ್ತಷ್ಟು ರೂಪುರೇಷೆಗಳನ್ನು ರಚಿಸಿ ಮುಂದುವರಿಯುತ್ತೇನೆ. ನಗರದ ರಸ್ತೆ, ನೀರು ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುತ್ತೇನೆ. ಭೌಗೋಳಿಕತೆ, ಪ್ರಾಕೃತಿಕವಾಗಿ ಮಂಗಳೂರು ನಗರದ ಅಭಿವೃದ್ಧಿಗೆ ವಿಫುಲ ಅವಕಾಶವಿದ್ದು, ನನ್ನ ಆಡಳಿತ ಅವಧಿಯಲ್ಲಿ ಪ್ರತಿಪಕ್ಷ ನಾಯಕರು, ಎಲ್ಲ ಸದಸ್ಯರು, ಅಧಿಕಾರಿ ವರ್ಗವನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸುತ್ತೇನೆ ಎಂದರು.
ಭಾರತೀಯ ಜನತಾ ಪಕ್ಷ ನನಗೆ ಉಪಮೇಯರ್ ಸ್ಥಾನ ನೀಡಿ ದೊಡ್ಡ ಜವಾಬ್ದಾರಿ ನೀಡಿದ್ದು, ತುಂಬಾ ಖುಷಿಯಾಗಿದೆ. ಇದಕ್ಕೆ ಪಕ್ಷದ ಎಲ್ಲಾ ನಾಯಕರಿಗೆ ಅಭಾರಿಯಾಗಿದ್ದೇನೆ. ಆಡಳಿತಾವಧಿಯಲ್ಲಿ ಜನರ ನಿರೀಕ್ಷೆಗೆ ಕಿಂಚಿತ್ತೂ ನಿರಾಶೆ ಯಾಗದಂತೆ ಕರ್ತವ್ಯ ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಪಮೇಯರ್ ಭಾನುಮತಿ ಪಿ.ಎಸ್. ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…