Featured

ಮಂಗಳೂರು: ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ: ನೂತನ ಮೇಯರ್ ಮನೋಜ್ ಕೋಡಿಕಲ್ – vishwanews24

ಮಂಗಳೂರು: ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ: ನೂತನ ಮೇಯರ್ ಮನೋಜ್ ಕೋಡಿಕಲ್

ಜನರ ನಿರೀಕ್ಷೆಗೆ ಕಿಂಚಿತ್ತೂ ನಿರಾಶೆ ಯಾಗದಂತೆ ಕರ್ತವ್ಯ ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಉಪಮೇಯರ್ ಭಾನುಮತಿ ಪಿ.ಎಸ್

ಮಂಗಳೂರು: ರಾಜ್ಯದಲ್ಲಿ ಬೆಂಗಳೂರು ಬಳಿಕ ಅತೀ ದೊಡ್ಡ ಹಾಗೂ ಶೀಘ್ರ ಗತಿಯಲ್ಲಿ ಬೆಳೆವಣಿಗೆ ಕಾಣುತ್ತಿರುವ ಮಂಗಳೂರು ನಗರದ ಅಭಿವೃದ್ಧಿಗೆ ನಾನು ಮೊದಲ ಆದ್ಯತೆ ನೀಡುತ್ತೇನೆ ಎಂದು ನೂತನ ಮೇಯರ್ ಆಗಿ ಆಯ್ಕೆಯಾದ ಮನೋಜ್ ಕುಮಾರ್ ಕೋಡಿಕಲ್ ಹೇಳಿದರು.

ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು, ಮೊದಲ ಬಾರಿ ಮನಪಾ ಸದಸ್ಯನಾ ಗಿರುವ ನನಗೆ ಮೇಯರ್ ಅವಕಾಶ ಸಿಕ್ಕಿದ್ದು ತುಂಬಾ ಖುಷಿಯಾಗಿದೆ. ಇದಕ್ಕೆ ಪಕ್ಷಕ್ಕೆ, ನಾಯಕರಿಗೆ ನಾನು ಅಭಾರಿಯಾಗಿ ದ್ದೇನೆ. ಈ ಹಿಂದಿನ ನಾಲ್ಕು ಮೇಯರ್‌ಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದು, ಅವರನ್ನು ಮಾದರಿಯಾಗಿಟ್ಟು ಆ ಯೋಜನೆಗಳ ಜತೆ ಮತ್ತಷ್ಟು ರೂಪುರೇಷೆಗಳನ್ನು ರಚಿಸಿ ಮುಂದುವರಿಯುತ್ತೇನೆ. ನಗರದ ರಸ್ತೆ, ನೀರು ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುತ್ತೇನೆ. ಭೌಗೋಳಿಕತೆ, ಪ್ರಾಕೃತಿಕವಾಗಿ ಮಂಗಳೂರು ನಗರದ ಅಭಿವೃದ್ಧಿಗೆ ವಿಫುಲ ಅವಕಾಶವಿದ್ದು, ನನ್ನ ಆಡಳಿತ ಅವಧಿಯಲ್ಲಿ ಪ್ರತಿಪಕ್ಷ ನಾಯಕರು, ಎಲ್ಲ ಸದಸ್ಯರು, ಅಧಿಕಾರಿ ವರ್ಗವನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸುತ್ತೇನೆ ಎಂದರು.

ಭಾರತೀಯ ಜನತಾ ಪಕ್ಷ ನನಗೆ ಉಪಮೇಯರ್ ಸ್ಥಾನ ನೀಡಿ ದೊಡ್ಡ ಜವಾಬ್ದಾರಿ ನೀಡಿದ್ದು, ತುಂಬಾ ಖುಷಿಯಾಗಿದೆ. ಇದಕ್ಕೆ ಪಕ್ಷದ ಎಲ್ಲಾ ನಾಯಕರಿಗೆ ಅಭಾರಿಯಾಗಿದ್ದೇನೆ. ಆಡಳಿತಾವಧಿಯಲ್ಲಿ ಜನರ ನಿರೀಕ್ಷೆಗೆ ಕಿಂಚಿತ್ತೂ ನಿರಾಶೆ ಯಾಗದಂತೆ ಕರ್ತವ್ಯ ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಪಮೇಯರ್ ಭಾನುಮತಿ ಪಿ.ಎಸ್. ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago