ಮಂಗಳೂರು: ನಗರದ ತೊಕ್ಕೊಟ್ಟು ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.
ಕಮಿಷನರ್ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಸರಗೋಡು ಕೊಡ್ಲಮೊಗರು ನಿವಾಸಿ ಅಬೂಬಕರ್ ಸಮದ್ (24), ಕಾಸರಗೋಡು ಕಡಂಬಾರು ನಿವಾಸಿಗಳಾದ ಮುಹಮ್ಮದ್ ಅಶ್ರಫ್ (30), ಮುಹಮ್ಮದ್ ಅಫ್ರಿದ್ (22) ಹಾಗೂ ಮುಹಮ್ಮದ್ ಅರ್ಷದ್ (18) ಬಂಧಿತ ಆರೋಪಿಗಳು. ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಕೋದಂಡರಾಮ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ವಿವರಿಸಿದರು.
ಬಂಧಿತ ಆರೋಪಿಗಳಿಂದ ಎರಡು ಲಕ್ಷ ರೂ. ಮೌಲ್ಯದ 10 ಕೆ.ಜಿ. ಗಾಂಜಾ, 2.5 ಲಕ್ಷ ಮೌಲ್ಯದ ಹುಂಡೈ ಕಾರು, 50 ಸಾವಿರ ರೂ. ಮೌಲ್ಯದ ಸ್ಕೂಟರ್, ಮೂರು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಸ್ವಾಧೀನಪಡಿಸಿಕೊಳ್ಳಲಾದ ಸೊತ್ತುಗಳ ಮೌಲ್ಯ 5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಎಂದವರು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…