ಮಂಗಳೂರು: ನಗರದ ಬಸ್ ಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ವಿರುದ್ದ ಆ. 21 ರ ಮಂಗಳವಾರ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 68 ಹಾರ್ನ್ ಗಳನ್ನು ತೆರವು ಮಾಡಿದರು.
ನಗರದ ಆರ್.ಟಿ.ಓ , ಬಿಜೈ ರಸ್ತೆ ಫಳ್ನೀರ್ ಪಂಪ್ ವೆಲ್ , ಬೈಕಂಪಾಡಿ, ಮೊದಲಾದ ಕಡೆ ಕಾರ್ಯಾಚರಣೆ ನಡೆಸಲಾಯಿತು. ಈ ಹಿಂದೆಯೂ ಹಲವು ಬಾರಿ ಬಸ್ ಗಳಲ್ಲಿ ಅಳವಡಿಸಿದ್ದ ಕರ್ಕಳ ಹಾರ್ಣ್ ಗಳನ್ನು ತೆರವು ಮಾಡಲಾಗಿತ್ತು. ಆದರೆ ಬಸ್ ಚಾಲಕರು ಮತ್ತೆ ಕರ್ಕಶ ಹಾರ್ನ್ ಗಳನ್ನ ಮತ್ತೆ ಅಳವಡಿಸಿದ್ದು, ಅವರಿಗೆ ಎಚ್ಚರಿಕೆ ನೀಡಲಾಗಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಹರ್ಷ ಅವರು, ‘ಕರ್ಕಶ ಹಾರ್ನ್ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಗಿದ್ದು ಇನ್ನು ಮಂಗಳೂರು ಸ್ವಲ್ಪ ಮಟ್ಟಿಗೆ ಶಾಂತವಾಗಬಹುದು ಎಂದು ಬರೆದುಕೊಂಡಿದ್ದಾರೆ.’
ಕಂಕನಾಡಿ ಕದ್ರಿ ಪಾಂಡೇಶ್ವರ ಸುರತ್ಕಲ್ ಸಂಚಾರ ಪೊಲೀಸರು ಏಕಕಾಲದಲ್ಲಿ ಎಲ್ಲಾ ಕಡೆ ಕಾರ್ಯಾಚರಣೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…