ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ 32 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಹಾಗೂ 39 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ 14 ಸಹಾಯಕಿಯರು, ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ 3 ಸಹಾಯಕಿಯರು, ಮೂಡಬಿದ್ರೆ ತಾಲೂಕು ವ್ಯಾಪ್ತಿಯಲ್ಲಿ 4 ಸಹಾಯಕಿಯರು ಹಾಗೂ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ 4 ಕಾರ್ಯಕರ್ತೆಯರು ಮತ್ತು 18 ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆಗಸ್ಟ್ 10 ರೊಳಗಾಗಿ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ/ ಗ್ರಾಮಾಂತರ ಕಛೇರಿಗೆ ಸಲ್ಲಿಸಬೇಕು.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಗೆ ಹುದ್ದೆಗೆ ಆಯ್ಕೆಯಾಗಲು ಅರ್ಹತೆ ಮಾನದಂಡಗಳು: ಅಭ್ಯರ್ಥಿಯ ವಯಸ್ಸು 19-35 ವರ್ಷದೊಳಗಿನವರಾಗಿರಬೇಕು. (ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ). ಗ್ರಾಮಾಂತರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು. ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆಗೆ ಸ್ಥಳೀಯ ಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ, ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದಿರಬೇಕು. ನಗರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ವಾರ್ಡಿನಲ್ಲಿ ವಾಸ್ತವ್ಯ ಹೊಂದಿರಬೇಕು. ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದಿರಬೇಕು (ಚುನಾವಣಾ ವಾರ್ಡ್ಗಳನ್ನು ಪರಿಗಣಿಸುವಂತಿಲ್ಲ). ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಟ ಪಿ.ಯು.ಸಿ ವಿದ್ಯಾರ್ಹತೆ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಯಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗಳಿಗೆ ವಿಧವೆ ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಗೆ ಒಳಗಾದವರು ಮತ್ತು ಇಲಾಖಾ ಸಂಸ್ಥೆಗಳ ನಿವಾಸಿಗಳನ್ನು ಹೊರತು ಪಡಿಸಿ ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೇ ಮೂರನೇ ಆದ್ಯತೆ ಮೇರೆಗೆ ನೇರವಾಗಿ ವಿಧವೆಯನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಿದ ನಂತರ ವಿಧವೆಯಾದಲ್ಲಿ ಪರಿಗಣಿಸುವಂತಿಲ್ಲ. ವಿಧವೆಯರು ತಾವು ಪ್ರಸ್ತುತ ಎಲ್ಲಿ ವಾಸವಿರುವುದಾಗಿ, ವಾಸಸ್ಥಳ ದೃಢೀಕರಣವನ್ನು ಸಲ್ಲಿಸಿರುತ್ತಾರೆ, ಆ ಸ್ಥಳವನ್ನು ಅವರ ವಾಸಸ್ಥಳವೆಂದು ಪರಿಗಣಿಬೇಕು. ವಿಧವೆಯರು ಪತಿಯ ಮರಣ ಪ್ರಮಾಣಪತ್ರ ಅಥವಾ ವಿಧವಾ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು.
ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ: ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತಿರ್ಣವಾಗಿರಬೇಕು. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜಶಾಸ್ತ್ರ/ ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು ಪ್ರಮಾಣ ಪತ್ರ/ ಅಂಕಪಟ್ಟಿಯ ಗರಿಷ್ಟ 625 ಕನಿಷ್ಟ 219 ಅಂಕಗಳನ್ನು ಹೊಂದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ನಗರದ ವೆಲೆನ್ಸಿಯಾ ಸಿಲ್ವಾ ಕ್ರಾಸ್ ರೋಡ್ ರಸ್ತೆಯಲ್ಲಿರುವ ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ (ದೂರವಾಣಿ ಸಂಖ್ಯೆ : 0824-2959809) ಹಾಗೂ ನಗರದ ಉರ್ವಾ ಮಾರ್ಕೆಟ್ ಕಟ್ಟಡದ 3 ನೇ ಮಹಡಿಯಲ್ಲಿರುವ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಕಛೇರಿ (ದೂ.ಸಂ: 0824-2263199) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…