Featured

ಮಂಗಳೂರು ನಗರ ದಕ್ಷಿಣ: ಮೂರನೇ ಬಾರಿಗೆ ಕಾಂಗ್ರೆಸ್ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾದ ಜೆ.ಆರ್.ಲೋಬೊ – Vishwanews24

ಮಂಗಳೂರು ನಗರ ದಕ್ಷಿಣ: ಮೂರನೇ ಬಾರಿಗೆ ಕಾಂಗ್ರೆಸ್ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾದ ಜೆ.ಆರ್.ಲೋಬೊ

ಮಂಗಳೂರು, : ರಾಜ್ಯ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಇಂದು ಪಕ್ಷವು ಪ್ರಕಟಿಸಿದ್ದು, ಮಾಜಿ ಶಾಸಕ ಜೆ.ಆರ್.ಲೋಬೊ ಮೂರನೇ ಬಾರಿಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸತತ ನಾಲ್ಕು ಬಾರಿ ಶಾಸಕರಾಗಿದ್ದ ಎನ್.ಯೋಗೀಶ್ ಭಟ್‌ರನ್ನು 2013ರ ಚುನಾವಣೆಯಲ್ಲಿ 12,275 ಮತಗಳ ಅಂತರದಿಂದ ಮಣಿಸಿ ಮೊದಲ ಬಾರಿ ವಿಧಾನಸಭೆ ಪ್ರವೇಶಿದ್ದ ಜೆ.ಆರ್.ಲೋಬೊ, 2018ರ ಚುನಾವಣೆಯಲ್ಲಿ ಬಿಜೆಪಿಯ ಡಿ.ವೇದವ್ಯಾಸ ಕಾಮತ್ ವಿರುದ್ಧ 16,075 ಮತಗಳ ಅಂತರದಿಂದ ಸೋಲುಂಡಿದ್ದರು.

70ರ ಹರೆಯದ ಲೋಬೊ ಶಾಸಕರಾಗಿದ್ದಾಗ ಮಂಗಳೂರು ನಗರಕ್ಕೆ 750 ಕೋ.ರೂ. ಮೊತ್ತದ ‘ಜಲಸಿರಿ’ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ ಸಹಿತ ಅನೇಕ ಯೋಜನೆಗಳ ಕಾಮಗಾರಿಯನ್ನು ಅನುಷ್ಠಾನಗೊಳಿಸಿದ್ದರು.

ಜಾನ್ ರಿಚರ್ಡ್ ಲೋಬೊ ತನ್ನ 23ರ ಹರೆಯದಲ್ಲೇ ಕೆಎಎಸ್ ತೇರ್ಗಡೆಯಾಗಿ ತಹಶೀಲ್ದಾರ್, ಸಹಾಯಕ ಆಯುಕ್ತ, ಮಹಾನಗರ ಪಾಲಿಕೆ ಆಯುಕ್ತ, ಕರ್ನಾಟಕ ನಗರಾಭಿವೃದ್ಧಿ ಮತ್ತು ಕರಾವಳಿ ಪರಿಸರ ನಿರ್ವಹಣೆ ಯೋಜನೆಯ ಜಂಟಿ ಯೋಜನಾ ನಿರ್ದೇಶಕರಾಗಿ, ಜಿಲ್ಲಾಧಿಕಾರಿಯ ಸ್ಥಾನೀಯ ಸಹಾಯಕ ಹೀಗೆ ಹಲವು ಹುದ್ದೆಗಳಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ರಾಜಕೀಯ ರಂಗ ಪ್ರವೇಶಿಸಿದ್ದರು.

 

Vishwa News 24

Recent Posts

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ…

2 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

 ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ…

2 hours ago

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  -vishwanews24

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…

3 hours ago

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ -vishwanews24

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ…

3 hours ago

ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ -vishwanews24

ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…

3 hours ago

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ -vishwanews24

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್‌ವೊಂದು…

4 hours ago