ಮಂಗಳೂರು, : ರಾಜ್ಯ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಇಂದು ಪಕ್ಷವು ಪ್ರಕಟಿಸಿದ್ದು, ಮಾಜಿ ಶಾಸಕ ಜೆ.ಆರ್.ಲೋಬೊ ಮೂರನೇ ಬಾರಿಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸತತ ನಾಲ್ಕು ಬಾರಿ ಶಾಸಕರಾಗಿದ್ದ ಎನ್.ಯೋಗೀಶ್ ಭಟ್‌ರನ್ನು 2013ರ ಚುನಾವಣೆಯಲ್ಲಿ 12,275 ಮತಗಳ ಅಂತರದಿಂದ ಮಣಿಸಿ ಮೊದಲ ಬಾರಿ ವಿಧಾನಸಭೆ ಪ್ರವೇಶಿದ್ದ ಜೆ.ಆರ್.ಲೋಬೊ, 2018ರ ಚುನಾವಣೆಯಲ್ಲಿ ಬಿಜೆಪಿಯ ಡಿ.ವೇದವ್ಯಾಸ ಕಾಮತ್ ವಿರುದ್ಧ 16,075 ಮತಗಳ ಅಂತರದಿಂದ ಸೋಲುಂಡಿದ್ದರು.
70ರ ಹರೆಯದ ಲೋಬೊ ಶಾಸಕರಾಗಿದ್ದಾಗ ಮಂಗಳೂರು ನಗರಕ್ಕೆ 750 ಕೋ.ರೂ. ಮೊತ್ತದ ‘ಜಲಸಿರಿ’ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ ಸಹಿತ ಅನೇಕ ಯೋಜನೆಗಳ ಕಾಮಗಾರಿಯನ್ನು ಅನುಷ್ಠಾನಗೊಳಿಸಿದ್ದರು.
ಜಾನ್ ರಿಚರ್ಡ್ ಲೋಬೊ ತನ್ನ 23ರ ಹರೆಯದಲ್ಲೇ ಕೆಎಎಸ್ ತೇರ್ಗಡೆಯಾಗಿ ತಹಶೀಲ್ದಾರ್, ಸಹಾಯಕ ಆಯುಕ್ತ, ಮಹಾನಗರ ಪಾಲಿಕೆ ಆಯುಕ್ತ, ಕರ್ನಾಟಕ ನಗರಾಭಿವೃದ್ಧಿ ಮತ್ತು ಕರಾವಳಿ ಪರಿಸರ ನಿರ್ವಹಣೆ ಯೋಜನೆಯ ಜಂಟಿ ಯೋಜನಾ ನಿರ್ದೇಶಕರಾಗಿ, ಜಿಲ್ಲಾಧಿಕಾರಿಯ ಸ್ಥಾನೀಯ ಸಹಾಯಕ ಹೀಗೆ ಹಲವು ಹುದ್ದೆಗಳಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ರಾಜಕೀಯ ರಂಗ ಪ್ರವೇಶಿಸಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…