Featured

ಮಂಗಳೂರು ನಗರ ಪ್ರವೇಶಿಸಿದ ಶೌರ್ಯ ಜಾಗರಣ ರಥಯಾತ್ರೆ – ಅಡ್ಯಾರಿನಲ್ಲಿ ಭವ್ಯ ಸ್ವಾಗತ – Vishwanews24

ಮಂಗಳೂರು ನಗರ ಪ್ರವೇಶಿಸಿದ ಶೌರ್ಯ ಜಾಗರಣ ರಥಯಾತ್ರೆ – ಅಡ್ಯಾರಿನಲ್ಲಿ ಭವ್ಯ ಸ್ವಾಗತ

ಮಂಗಳೂರು : ವಿಶ್ವ ಹಿಂದು ಪರಿಷತ್​ನ 60ನೇ ವರ್ಷಾಚರಣೆ ಪ್ರಯುಕ್ತ ದೇಶಾದ್ಯಂತ ಯುವ ಸಂಘಟನೆಯಾದ ಬಜರಂಗದಳ ನೇತೃತ್ವದಲ್ಲಿ ಸೆ.25 ರಂದು ಚಿತ್ರದುರ್ಗದಲ್ಲಿ ಆರಂಭವಾದ ಶೌರ್ಯ ರಥ ಯಾತ್ರೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ 1600 ಕಿ.ಮೀ. ಸಂಚರಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ನಡೆಸಿ ಇದೀಗ ಕರಾವಳಿ ಜಿಲ್ಲೆ ಪ್ರವೇಶಿಸಿದ್ದು, ಪುತ್ತೂರು ಮತ್ತು ಬಂಟ್ವಾಳದಲ್ಲಿ ಯಶಸ್ವಿ ಸಮಾವೇಶಗಳನ್ನು ನಡೆಸಿ ಇದೀಗ ಮಂಗಳೂರು ನಗರ ಪ್ರವೇಶಿಸಿದೆ.

ನಗರದ ಹೊರವಲಯದ ಅಡ್ಯಾರಿನಲ್ಲಿ ರಥಕ್ಕೆರ ಭವ್ಯ ಸ್ವಾಗತ ಕೋರಲಾಯಿತು. ಅಪರಾಹ್ನ ನಗರದಲ್ಲಿ ರಥಯಾತ್ರೆ ನಡೆಯಲಿದ್ದು ಇದಕ್ಕಾಗಿ ಭರ್ಜರಿ ತಯಾರಿ ನಡೆಸಲಾಗಿದೆ.

ನಗರ ಸಂಪೂರ್ಣ ಕೇಸರಿಮಯವಾಗಿದ್ದು ಮುಂಜಾಗೃತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.

ರಥ ಸಾಗುವ ಹಾದಿಯನ್ನು ಬಂಟಿಂಗ್ಸ್‌ ಬ್ಯಾನರುಗಳಿಂದ ಶೃಂಗರಿಸಲಾಗಿದೆ. ಸಂಜೆ 4.30ಕ್ಕೆ ನಗರದ ಕದ್ರಿ ಮೈದಾನದಲ್ಲಿ ಬೃಹತ್‌ ಸಾರ್ವಜನಿಕ ಸಭೆ ನಡೆಯಲಿದೆ. ಚಿಂತಕ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡಲಿದ್ದು ಸಾಧು ಸಂತರು, ವಿಹೆಚ್‌ಪಿ, ಬಜರಂಗದಳದ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳೆ ಸಂಜೆ 4 ಗಂಟೆಗೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಮೂಲಕ ಸಮಾರೋಪಗೊಳ್ಳಲಿದೆ.ಸಾಯಿರಾಧ ಗ್ರೂಪ್ಸ್​ ಉಡುಪಿಯ ಮನೋಹರ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಅದಮಾರು ಮಠದ ಈಶಪ್ರಿಯ ತೀರ್ಥರು, ಮಧ್ಯಪ್ರದೇಶದ ಅಖಿಲೇಶ್ವರಾನಂದ ಮಹಾರಾಜ್​, ಇವರು ಸಾನ್ನಿಧ್ಯ ವಹಿಸಲಿದ್ದಾರೆ.

ವಿಎಚ್​ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್​, ರಾಷ್ಟ್ರೀಯ ಸಹಸಂಯೋಜಕ ಸೂರ್ಯನಾರಾಯಣ ಪಾಲ್ಗೊಳ್ಳಲಿದ್ದಾರೆ..ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago