ಮಂಗಳೂರು: ನಡುರಾತ್ರಿ ರೌಡಿಶೀಟರ್‌ಗಳು ತಲ್ವಾರ್ ಹಿಡಿದು ಗಲಾಟೆ ಮಾಡಿಕೊಂಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪೂರ್ವದ್ವೇಷದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರ ಗುಂಪಿನ ಮಧ್ಯೆ ತಲ್ವಾರ್ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ರೌಡಿಗಳ ಗ್ಯಾಂಗ್ ನಡುಬೀದಿಯಲ್ಲಿ ಯುವಕರನ್ನ ಅಟ್ಟಾಡಿಸಿ ತಲ್ವಾರಿನಲ್ಲಿ ಕೊಚ್ಚಿದ್ದು, ಗಾಯಗೊಂಡ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂಬವರ ಸ್ಥಿತಿ ಗಂಭೀರವಾಗಿದೆ.
ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಹಲ್ಲೆ ನಡೆಸಿದ ಆರೋಪಿಗಳು. ಗಾಯಗೊಂಡ ತಸ್ಲೀಮ್ ಹಾಗೂ ಸ್ನೇಹಿತರು ಮಾತನಾಡುತ್ತಿದ್ದ ವೇಳೆ ತಸ್ಲೀಮ್‌ಗೆ ಕರೆಯೊಂದು ಬಂದಿತ್ತು. ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ನಿಂದಿಸಿ, ಆತ ಇರುವಲ್ಲಿಗೆ ಬರುವಂತೆ ಸವಾಲು ಹಾಕಿದ್ದ. ಈ ವೇಳೆ ತಸ್ಲೀಮ್ ಹಾಗೂ ತಂಡ ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ ಅಲ್ಲಿ ಆರೋಪಿಗಳು ದಾಳಿ ನಡೆಸಿದ್ದಾರೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…