Featured

ಮಂಗಳೂರು : ನಡುರಾತ್ರಿ ತಲ್ವಾರ್‌ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು ; ಇಬ್ಬರು ಗಂಭೀರ – vishwanews24

ಮಂಗಳೂರು : ನಡುರಾತ್ರಿ ತಲ್ವಾರ್‌ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು ; ಇಬ್ಬರು ಗಂಭೀರ

ಮಂಗಳೂರು: ನಡುರಾತ್ರಿ ರೌಡಿಶೀಟರ್‌ಗಳು  ತಲ್ವಾರ್ ಹಿಡಿದು ಗಲಾಟೆ ಮಾಡಿಕೊಂಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪೂರ್ವದ್ವೇಷದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರ ಗುಂಪಿನ ಮಧ್ಯೆ ತಲ್ವಾರ್ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ‌ ರೌಡಿಗಳ ಗ್ಯಾಂಗ್ ನಡುಬೀದಿಯಲ್ಲಿ ಯುವಕರನ್ನ ಅಟ್ಟಾಡಿಸಿ ತಲ್ವಾರಿನಲ್ಲಿ ಕೊಚ್ಚಿದ್ದು, ಗಾಯಗೊಂಡ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂಬವರ ಸ್ಥಿತಿ ಗಂಭೀರವಾಗಿದೆ.

ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಹಲ್ಲೆ ನಡೆಸಿದ ಆರೋಪಿಗಳು. ಗಾಯಗೊಂಡ ತಸ್ಲೀಮ್ ಹಾಗೂ ಸ್ನೇಹಿತರು ಮಾತನಾಡುತ್ತಿದ್ದ ವೇಳೆ ತಸ್ಲೀಮ್‌ಗೆ ಕರೆಯೊಂದು ಬಂದಿತ್ತು. ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ನಿಂದಿಸಿ, ಆತ ಇರುವಲ್ಲಿಗೆ ಬರುವಂತೆ ಸವಾಲು ಹಾಕಿದ್ದ. ಈ ವೇಳೆ ತಸ್ಲೀಮ್ ಹಾಗೂ ತಂಡ ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ ಅಲ್ಲಿ ಆರೋಪಿಗಳು ದಾಳಿ ನಡೆಸಿದ್ದಾರೆ.

ಈ ಸಂಬಂಧ ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

40 seconds ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

3 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

3 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

3 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

4 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

4 hours ago