ಮಂಗಳೂರು : ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಮಳವೂರು ರೈಲ್ವೇ ಸೇತುವೆಯ ಸಮೀಪದ ಫಲ್ಗುಣಿ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮಂಗಳೂರು ನಗರದ ಕೋಡಿಕಲ್‌ನ ನಿವಾಸಿಗಳಾದ ಅರುಣ್ (19), ದೀಕ್ಷಿತ್ (20), ಕೊಟ್ಟಾರ ಚೌಕಿಯ ಸುಮಿತ್ (20) ಹಾಗೂ ಉರ್ವಸ್ಟೋರಿನ ಅನಿಶ್ (19) ಅವರು ಮಳವೂರು ರೈಲ್ವೇ ಸೇತುವೆಯ ಬಳಿ ಫಲ್ಗುಣಿ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ನಾಲ್ವರ ಪೈಕಿ ಸುಮಿತ್ ಹಾಗೂ ಅನಿಶ್ ನದಿ ನೀರಿನ ಸುಳಿಗೆ ಸಿಲುಕಿ ನೀರುಪಾಲಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದ ಬಜಪೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಆರಂಭಿಸಿದ್ದರು. ಅಗ್ನಿಶಾಮಕ ದಳದವರು ಬೆಳಕಿನ ವ್ಯವಸ್ಥೆಯೊಂದಿಗೆ ತಡರಾತ್ರಿಯವರೆಗೂ ಶೋಧ ಕಾರ್ಯ ನಡೆಸಿದ್ದು, ಸ್ಥಳಕ್ಕೆ ಮುಳುಗು ತಜ್ಞರು ಕೂಡ ಆಗಮಿಸಿದ್ದರು. ಜೊತೆಗೆ ಬಜಪೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೀಪ್ ಜಿ.ಎಸ್. ಮತ್ತು ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು.
ಮೃತ ಸುಮಿತ್ ಕೊಟ್ಟಾರ ಚೌಕಿಯಲ್ಲಿನ ಗ್ಯಾರೇಜ್ ವೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಅನಿಶ್ ಸೋಡಾ ಫಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…