Featured

ಮಂಗಳೂರು:  ನನಗೂ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಸಂಬಂಧ ಇಲ್ಲ : ವಜ್ರದೇಹಿ ಸ್ವಾಮೀಜಿ – Vishwanews24

ಮಂಗಳೂರು:  ನನಗೂ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಸಂಬಂಧ ಇಲ್ಲ : ವಜ್ರದೇಹಿ ಮಠದ ಸ್ವಾಮೀಜಿ

ಮಂಗಳೂರು: ಬಿಜೆಪಿ ಟಿಕೆಟ್‍ಗಾಗಿ  ಡೀಲ್ ಪ್ರಕರಣದಲ್ಲಿ ಮತ್ತೊಬ್ಬ ಸ್ವಾಮೀಜಿ ಹೆಸರು ಕೇಳಿಬಂದಿದೆ. ಚೈತ್ರಾ ಕುಂದಾಪುರ  ಐಟಿ ಇಲಾಖೆಗೆ ಬರೆದ ಪತ್ರದಲ್ಲಿ ವಿಶ್ವ ಹಿಂದು ಪರಿಷತ್ ಸಂಘಟನೆಯಲ್ಲಿ ಗುರುತಿಸಿರುವ ಮಂಗಳೂರಿನ ವಜ್ರದೇಹಿ ಮಠದ  ರಾಜಶೇಖರಾನಂದ ಸ್ವಾಮೀಜಿ ಹೆಸರು ಕೇಳಿಬಂದಿದೆ.

ಈ ಸಂಬಂಧ  ಪ್ರತಿಕ್ರಿಯಿಸಿದ ಸ್ವಾಮೀಜಿ, ನನಗೂ ಆಕೆಯ ಪ್ರಕರಣಕ್ಕೂ ಸಂಬಂಧ ಇಲ್ಲ. ಜುಲೈ ತಿಂಗಳಲ್ಲಿ ಹಿಂದೂ ಸಂಘಟನೆಯ ಸತ್ಯಜಿತ್ ಸುರತ್ಕಲ್ ಫೋನ್ ಮಾಡಿದ್ದರು. ಗೋವಿಂದ ಪೂಜಾರಿ ಟಿಕೆಟ್ ವಿಚಾರದಲ್ಲಿ ನನಗೆ ಪ್ರಶ್ನೆ ಮಾಡಿದ್ದರು. ಆದರೆ ನನಗೇನೂ ತಿಳಿದಿರಲಿಲ್ಲ, ನನ್ನಲ್ಲಿ ಯಾಕೆ ಪ್ರಶ್ನೆ ಮಾಡುವುದೆಂದು ಕೇಳಿದ್ದೆ. ಬಳಿಕ ಅವರೇ ಫೋನ್ ಮಾಡಿ, ಚೈತ್ರಾ ಮತ್ತು ಅಭಿನವ ಹಾಲಶ್ರೀ ಹೆಸರಿದೆ ಎಂದು ಹೇಳಿದ್ದರು ಎಂದರು.

ಚೈತ್ರಾ ಜೊತೆ ಸಂಪರ್ಕ ಇದ್ದುದರಿಂದ ಆಕೆಗೆ ಫೋನ್ ಮಾಡಿ ಸ್ಪಷ್ಟನೆ ಕೇಳಿದ್ದೆ. ಮೂರು ಕೋಟಿ ದುಡ್ಡಿನ ಬಗ್ಗೆ ಕೇಳಿದಾಗ, ಒಂದೂವರೆ ಇದ್ದಿದ್ದು ಮೂರು ಕೋಟಿ ಆಯ್ತಾ? ಇನ್ನು ಅದು 4-5 ಕೋಟಿ ಆಗಬಹುದು ಎಂದು ಆಕೆ ಹೇಳಿದ್ದಳು, ಸತ್ಯ ಹೇಳು ಎಂದಿದ್ದೆ. ಆಕೆ ತನಗೇನೂ ಗೊತ್ತಿಲ್ಲ ಎಂದಿದ್ದರು, ಚಕ್ರವರ್ತಿ ಸೂಲಿಬೆಲೆ ಅವರಿಗೂ ಫೋನ್ ಮಾಡಿದ್ದೆ. ಅಭಿನವ ಹಾಲಶ್ರೀ ಸ್ವಾಮೀಜಿ, ಸೂಲಿಬೆಲೆ ಜೊತೆಗೆ ಗುರುತಿಸಿದ್ದರಿಂದ ಅವರಿಗೂ ವಿಷಯ ತಿಳಿಸಿದ್ದೆ ಎಂದು ಹೇಳಿದರು.

ನಾವು ವಿಶ್ವ ಹಿಂದೂ ಪರಿಷತ್ತಿನಲ್ಲಿ ಗುರುತಿಸಿದ್ದರಿಂದ ಶರಣ್ ಪಂಪ್ ವೆಲ್ ಅವರಿಗೂ ವಿಷಯ ತಿಳಿಸಿದ್ದೇವೆ. ನಿಮಗೇನೂ ಸಂಪರ್ಕ ಇಲ್ಲಾಂದ್ರೆ ನೀವ್ಯಾಕೆ ತಲೆ ಬಿಸಿ ಮಾಡ್ತೀರಿ ಎಂದು ಶರಣ್ ಹೇಳಿದ್ದರು. ಈಗ ನನ್ನ ಹೆಸರನ್ನು ಐಟಿ ಇಲಾಖೆಗೆ ಬರೆದ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ವಿಷಯ ಇಷ್ಟೇ ಆಗಿದ್ದರೂ, ನನ್ನ ಹೆಸರು ಬಂದಿರುವುದು ಬೇಸರವಾಗಿದೆ. ಹಣದ ವಿಚಾರದಲ್ಲಿ ತನಗೇನೂ ಗೊತ್ತಿಲ್ಲ, ಚೈತ್ರಾಳ ಪರಿಚಯ ಇದ್ದುದು ಹೌದು. ಹಾಗಂತ, ಆಕೆಯ ಜೊತೆಗೆ ಬೇರೇನೂ ಸಂಪರ್ಕ, ಮಾತುಕತೆ, ವಹಿವಾಟು ಇಲ್ಲ ಎಂದು ಅವರು ತಿಳಿಸಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

9 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

9 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

9 hours ago