ಮಂಗಳೂರು: ಬಿಜೆಪಿ ಟಿಕೆಟ್‍ಗಾಗಿ ಡೀಲ್ ಪ್ರಕರಣದಲ್ಲಿ ಮತ್ತೊಬ್ಬ ಸ್ವಾಮೀಜಿ ಹೆಸರು ಕೇಳಿಬಂದಿದೆ. ಚೈತ್ರಾ ಕುಂದಾಪುರ ಐಟಿ ಇಲಾಖೆಗೆ ಬರೆದ ಪತ್ರದಲ್ಲಿ ವಿಶ್ವ ಹಿಂದು ಪರಿಷತ್ ಸಂಘಟನೆಯಲ್ಲಿ ಗುರುತಿಸಿರುವ ಮಂಗಳೂರಿನ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೆಸರು ಕೇಳಿಬಂದಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ಸ್ವಾಮೀಜಿ, ನನಗೂ ಆಕೆಯ ಪ್ರಕರಣಕ್ಕೂ ಸಂಬಂಧ ಇಲ್ಲ. ಜುಲೈ ತಿಂಗಳಲ್ಲಿ ಹಿಂದೂ ಸಂಘಟನೆಯ ಸತ್ಯಜಿತ್ ಸುರತ್ಕಲ್ ಫೋನ್ ಮಾಡಿದ್ದರು. ಗೋವಿಂದ ಪೂಜಾರಿ ಟಿಕೆಟ್ ವಿಚಾರದಲ್ಲಿ ನನಗೆ ಪ್ರಶ್ನೆ ಮಾಡಿದ್ದರು. ಆದರೆ ನನಗೇನೂ ತಿಳಿದಿರಲಿಲ್ಲ, ನನ್ನಲ್ಲಿ ಯಾಕೆ ಪ್ರಶ್ನೆ ಮಾಡುವುದೆಂದು ಕೇಳಿದ್ದೆ. ಬಳಿಕ ಅವರೇ ಫೋನ್ ಮಾಡಿ, ಚೈತ್ರಾ ಮತ್ತು ಅಭಿನವ ಹಾಲಶ್ರೀ ಹೆಸರಿದೆ ಎಂದು ಹೇಳಿದ್ದರು ಎಂದರು.
ಚೈತ್ರಾ ಜೊತೆ ಸಂಪರ್ಕ ಇದ್ದುದರಿಂದ ಆಕೆಗೆ ಫೋನ್ ಮಾಡಿ ಸ್ಪಷ್ಟನೆ ಕೇಳಿದ್ದೆ. ಮೂರು ಕೋಟಿ ದುಡ್ಡಿನ ಬಗ್ಗೆ ಕೇಳಿದಾಗ, ಒಂದೂವರೆ ಇದ್ದಿದ್ದು ಮೂರು ಕೋಟಿ ಆಯ್ತಾ? ಇನ್ನು ಅದು 4-5 ಕೋಟಿ ಆಗಬಹುದು ಎಂದು ಆಕೆ ಹೇಳಿದ್ದಳು, ಸತ್ಯ ಹೇಳು ಎಂದಿದ್ದೆ. ಆಕೆ ತನಗೇನೂ ಗೊತ್ತಿಲ್ಲ ಎಂದಿದ್ದರು, ಚಕ್ರವರ್ತಿ ಸೂಲಿಬೆಲೆ ಅವರಿಗೂ ಫೋನ್ ಮಾಡಿದ್ದೆ. ಅಭಿನವ ಹಾಲಶ್ರೀ ಸ್ವಾಮೀಜಿ, ಸೂಲಿಬೆಲೆ ಜೊತೆಗೆ ಗುರುತಿಸಿದ್ದರಿಂದ ಅವರಿಗೂ ವಿಷಯ ತಿಳಿಸಿದ್ದೆ ಎಂದು ಹೇಳಿದರು.
ನಾವು ವಿಶ್ವ ಹಿಂದೂ ಪರಿಷತ್ತಿನಲ್ಲಿ ಗುರುತಿಸಿದ್ದರಿಂದ ಶರಣ್ ಪಂಪ್ ವೆಲ್ ಅವರಿಗೂ ವಿಷಯ ತಿಳಿಸಿದ್ದೇವೆ. ನಿಮಗೇನೂ ಸಂಪರ್ಕ ಇಲ್ಲಾಂದ್ರೆ ನೀವ್ಯಾಕೆ ತಲೆ ಬಿಸಿ ಮಾಡ್ತೀರಿ ಎಂದು ಶರಣ್ ಹೇಳಿದ್ದರು. ಈಗ ನನ್ನ ಹೆಸರನ್ನು ಐಟಿ ಇಲಾಖೆಗೆ ಬರೆದ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ವಿಷಯ ಇಷ್ಟೇ ಆಗಿದ್ದರೂ, ನನ್ನ ಹೆಸರು ಬಂದಿರುವುದು ಬೇಸರವಾಗಿದೆ. ಹಣದ ವಿಚಾರದಲ್ಲಿ ತನಗೇನೂ ಗೊತ್ತಿಲ್ಲ, ಚೈತ್ರಾಳ ಪರಿಚಯ ಇದ್ದುದು ಹೌದು. ಹಾಗಂತ, ಆಕೆಯ ಜೊತೆಗೆ ಬೇರೇನೂ ಸಂಪರ್ಕ, ಮಾತುಕತೆ, ವಹಿವಾಟು ಇಲ್ಲ ಎಂದು ಅವರು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…