ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದ್ದು, ಕ್ಷಣ ಕ್ಷಣಕ್ಕೂ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇನ್ನು ಈಗಾಗಲೇ ಕೆಲವರು ಟಿಕೆಟ್ ಕನ್ಫರ್ಮ್ ಮಾಡಿಕೊಂಡು ಕ್ಷೇತ್ರಗಳಲ್ಲಿ ಬೀಡುಬಿಟ್ಟು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚುನಾವಣೆ ಸಂದರ್ಭದಲ್ಲೇ ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗಿವೆ. ಮಂಗಳೂರಿನ ಪುತ್ತೂರು ಕ್ಷೇತ್ರದ ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಂದಿಗೆ ಇರುವ ಫೋಟೋಗಳು ವೈರಲ್ ಆಗಿದ್ದು, ಈ ಬಗ್ಗೆ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆಯೊಂದಿಗಿನ ಫೋಟೋವನ್ನು ಅಲ್ಲಗೆಳೆದಿದ್ದು, ನನ್ನ ಫೋಟೋವನ್ನು ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಎಂದಿದ್ದಾರೆ. ಇನ್ನು ಈ ಬಗ್ಗೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಫೋಟೋವನ್ನು ಯಾರೋ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಇದೀಗ ಈ ಫೋಟೋವನ್ನು ವೈರಲ್ ಮಾಡುತ್ತಿರುವವ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಇನ್ನು ಉಪ್ಪಿನಂಗಡಿ ಪೊಲೀಸರು ಇನ್ಫಾರ್ಮೇಶನ್ ಟೆಕ್ನಾಲಜಿ ಆಕ್ಟ್ ಪ್ರಕಾರ ಎಫ್.ಐ.ಆರ್ ದಾಖಲು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…