Featured

ಮಂಗಳೂರು : ನನ್ನ ಫೋಟೋವನ್ನು ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ : ಸಂಜೀವ ಮಠಂದೂರು – Vishwanews24

ಚುನಾವಣೆ ಹೊತ್ತಲ್ಲೇ ಫೋಟೋ ಶಾಕ್ ..

ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಮಹಿಳೆಯೊಂದಿಗೆ ಇರುವ  ಫೋಟೋ ವೈರಲ್..

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದ್ದು, ಕ್ಷಣ ಕ್ಷಣಕ್ಕೂ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇನ್ನು ಈಗಾಗಲೇ ಕೆಲವರು ಟಿಕೆಟ್​ ಕನ್ಫರ್ಮ್​ ಮಾಡಿಕೊಂಡು ಕ್ಷೇತ್ರಗಳಲ್ಲಿ ಬೀಡುಬಿಟ್ಟು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚುನಾವಣೆ ಸಂದರ್ಭದಲ್ಲೇ ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗಿವೆ. ಮಂಗಳೂರಿನ ಪುತ್ತೂರು ಕ್ಷೇತ್ರದ ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಂದಿಗೆ ಇರುವ ಫೋಟೋಗಳು ವೈರಲ್​ ಆಗಿದ್ದು, ಈ ಬಗ್ಗೆ ಅವರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಮಹಿಳೆಯೊಂದಿಗಿನ ಫೋಟೋವನ್ನು ಅಲ್ಲಗೆಳೆದಿದ್ದು, ನನ್ನ ಫೋಟೋವನ್ನು ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಎಂದಿದ್ದಾರೆ. ಇನ್ನು ಈ ಬಗ್ಗೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಫೋಟೋವನ್ನು ಯಾರೋ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಇದೀಗ ಈ ಫೋಟೋವನ್ನು ವೈರಲ್ ಮಾಡುತ್ತಿರುವವ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಇನ್ನು ಉಪ್ಪಿನಂಗಡಿ ಪೊಲೀಸರು ಇನ್ಫಾರ್ಮೇಶನ್ ಟೆಕ್ನಾಲಜಿ ಆಕ್ಟ್ ಪ್ರಕಾರ ಎಫ್.ಐ.ಆರ್ ದಾಖಲು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

11 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

11 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

12 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

12 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

12 hours ago