ಮಂಗಳೂರು: ನನ್ನ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆ : ಸತ್ಯಜಿತ್ ಸುರತ್ಕಲ್ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ನನ್ನ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆ : ಸತ್ಯಜಿತ್ ಸುರತ್ಕಲ್ 

ಗನ್ ಮ್ಯಾನ್ ವಾಪಸ್ ಪಡೆದಿರುವುದಕ್ಕೆ ಹಿಂದೂ ಸಂಘಟನೆ ಮುಖಂಡ ಸತ್ಯಜಿತ್ ತೀವ್ರ ಆಕ್ರೋಶ..

ಮಂಗಳೂರು: ಸರಕಾರ ನನಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದಿದೆ. ನನ್ನ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆ ಎಂದು ಹಿಂದು ಸಂಘಟನೆಯ ಮುಖಂಡ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ನನಗೆ ಪ್ರಾಣ ಬೆದರಿಕೆ ಇದ್ದುದರಿಂದ ಪೊಲೀಸರೇ ಭದ್ರತಾ ಸಿಬ್ಬಂದಿ ಒದಗಿಸಿದ್ದರು. ಹದಿನಾರು ವರ್ಷಗಳಿಂದ ಇದ್ದ ಸಿಬಂದಿಯನ್ನು ಈಗ ಚುನಾವಣೆ ನೆಪದಲ್ಲಿ ವಾಪಸ್ ಪಡೆಯಲಾಗಿದೆ. ನನ್ನ ರಿವಾಲ್ವರ್ ಕೂಡ ತೆಗೆದಿಟ್ಟುಕೊಂಡಿದ್ದಾರೆ.

ಈ ಬಗ್ಗೆ ಗೃಹ ಸಚಿವರು, ಸಂಘ ಪರಿವಾರದ ಪ್ರಮುಖರಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ನಾನು ಹಿಂದುತ್ವಕ್ಕಾಗಿ ರಾಷ್ಟ್ರ ಹಿತಕ್ಕಾಗಿ ನಡೆಸಿದ ಹೋರಾಟದಿಂದ ಬೆದರಿಕೆ ಕರೆಗಳು ಬಂದಿದ್ದೇ ಹೊರತು ನನ್ನ ವೈಯಕ್ತಿಕ ವ್ಯವಹಾರಕ್ಕಲ್ಲ ಎಂದರು.

ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಶಿವಕುಮಾರ್‌ ನಾಮಪತ್ರ ಅಂಗೀಕಾರ – Vishwanews24

ನನ್ನ ಬಾಯಿ ಮುಚ್ಚಿಸಲು ಇಂತಹ ಕ್ಷುಲ್ಲಕ ಕೆಲಸ ಮಾಡುತ್ತಿದ್ದಾರೆ. ಆದರೆ ನಾನು ಹೋರಾಟ ಮುಂದುವರೆಸುತ್ತೇನೆ. ರಾಜಕೀಯ ಅಪೇಕ್ಷೆ ಇಲ್ಲ. ನನ್ನ ಹತ್ಯೆಯಾದರೆ ಸಂಘ ಪರಿವಾರದ ಯಾವ ನಾಯಕರೂ ನನ್ನ ಅಂತಿಮ ದರ್ಶನಕ್ಕೆ ಬರಬಾರದು, ಶವ ಮೆರವಣಿಗೆ ಮಾಡಬಾರದು ಎಂದು ಹೇಳಿದರು.

Leave a Reply