Categories: ಉಡುಪಿ

ಮಂಗಳೂರು : ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಾವಣೆ ವಿರುದ್ಧ ಸ್ವಾಯತ್ತ ಸಂಸ್ಥೆ ಈ.ಡಿ.ಯ ದುರುಪಯೋಗವನ್ನು ಖಂಡಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ನಾಯಕರನ್ನು ಸೋಮವಾರ ಪೊಲೀಸರು ತಡೆದು, ವಶಕ್ಕೆ ಪಡೆದರು.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಬಳಿ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ , ಮಾಜಿ ಸಂಸದ ವಿಜಯ್ ಇಂದರ್ ಸಿಂಗ್ಲಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಸ್ವಾಯತ್ತ ಸಂಸ್ಥೆಯಾದ ಈ.ಡಿ.ಯನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ವಿರುದ್ಧದ ಷಡ್ಯಂತ್ರ ಖಂಡಿಸಿದರು.

ಪ್ರತಿಭಟನೆಯ ಬಳಿಕ ಪಾದಯಾತ್ರೆ ಮೂಲಕ ಹೊರಟು ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಧರಣಿ ನಡೆಸಿ ಪಿವಿಎಸ್ ಬಳಿಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಪಾದಯಾತ್ರೆ ಹೊರಟ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ಪೊಲೀಸರು ಮಲ್ಲಿಕಟ್ಟೆ ಸರ್ಕಲ್ ಬಳಿ ತಡೆದರು. ಪ್ರತಿಭಟನೆ ನಡೆಸಿದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿ ಸೋಜ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.ಲೋಬೊ, ಪಕ್ಷದ ಪ್ರಮುಖರಾದ ಎಂ.ಎ.ಗಪೂರ್, ಇನಾಯತ್ ಅಲಿ, ಸದಾಶಿವ ಉಳ್ಳಾಲ, ಕೆ.ಅಶ್ರಫ್, ಶಾಲೆಟ್ ಪಿಂಟೊ, ಅಪ್ಪಿ, ಅಬ್ದುಲ್ ರವೂಫ್, ಸುರೇಶ್ ಬಳ್ಳಾಲ್, ಎಂ.ಎಸ್ ಮುಹಮ್ಮದ್ , ಶಶೀಧರ ಹೆಗ್ಡೆ, ಎಸ್ ಅಪ್ಪಿ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago