ಮಂಗಳೂರು: ಕೊರೊನಾ ಪಾಸಿಟಿವ್ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಮತ್ತು ಹಾಸ್ಟೆಲ್ಅನ್ನು ಕಂಟೈನ್ ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.
ಮಂಗಳೂರಿನಲ್ಲಿ ಶಿಕ್ಷಣ ಕೇಂದ್ರಗಳು ಸಾಕಷ್ಟಿವೆ . ಆದ್ದರಿಂದ ಕೇರಳದಿಂದ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇಲ್ಲಿಗೆ ಬಂದು ಶಿಕ್ಷಣ ಪಡೆಯುತ್ತಾರೆ. ಅದರಿಂದ ರಾಜ್ಯ ಸರ್ಕಾರ ಕಾಲೇಜುಗಳಿಗೆ ಗೈಡ್‌ಲೈನ್ಸ್ ನಿರ್ಮಿಸಿ ಅದರ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ನೀಡಿತ್ತು. ಆದರೆ ಈಗ ಮಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತೆ ಬಾಗಿಲು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ.
ಬುಧವಾರ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಆರ್.ಟಿ-ಪಿಸಿಆರ್ ಪರೀಕ್ಷೆ ಮಾಡುತ್ತಿದ್ದ ವೇಳೆ ಬರೋಬ್ಬರಿ 51 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಈ ಹಿನ್ನಲೆಯಲ್ಲಿ ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಈ ಹಿಂದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಸೇರಿ ವಿವಿಧ ಅಧಿಕಾರಿಗಳ ತಂಡ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿರ್ಲಕ್ಷ್ಯ ತೋರಿಸವರಿಗೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ : ಕಾಪು : ಮಾ. 20ರಂದು ಪಡುಬಿದ್ರಿ, ಬೆಳಪು ಹಾಗೂ ಮೂಳೂರಿಗೆ ನಬಾರ್ಡ್ ನಿಯೋಜಿತ ತಂಡ ಭೇಟಿ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…