Featured

ಮಂಗಳೂರು: ನರ್ಸಿಂಗ್ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣ: 9 ಮಂದಿ ಅರೆಸ್ಟ್ – Vishwanews24

ಮಂಗಳೂರು: ನರ್ಸಿಂಗ್ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣ: 9 ಮಂದಿ ಅರೆಸ್ಟ್ – Vishwanews24

ಮಂಗಳೂರು :ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ತಮ್ಮ ಅಪಾರ್ಟ್ ಮೆಂಟ್ ನ ಕೊಠಡಿಯಲ್ಲಿ ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ, ಹಣ ನೀಡುವಂತೆ ಪೀಡಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿ ರ್‍ಯಾಗಿಂಗ್ ನಡೆಸಿದ ಆರೋಪದಲ್ಲಿ 9 ಮಂದಿಯನ್ನು ಪಾಂಡೇಶ್ವರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಬಂಧಿತರನ್ನು ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಎಂದು ಗುರುತಿಸಲಾಗಿದ್ದು, ಬಂಧಿತರಲ್ಲಿ 7 ಮಂದಿ ಬೇರೊಂದು ಕಾಲೇಜಿನ ವಿದ್ಯಾರ್ಥಿಗಳು , ಓರ್ವ ಸಂತ್ರಸ್ತ ವಿದ್ಯಾರ್ಥಿಗಳ ಸೀನಿಯರ್ ಹಾಗೂ ಮತ್ತೋರ್ವ ಬಂಧಿಸಲ್ಪಟ್ಟವರು.

ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ ಅಮಲ್ ಗಿರೀಶ್ ಅವರು ಸ್ನೇಹಿತ ಕಾರ್ತಿಕ್ ವಿಜಯನ್ ಜತೆ ಅಪಾರ್ಟ್‌ಮೆಂಟ್ ಗೆ ತೆರಳುತ್ತಿದ್ದ ಸಂದರ್ಭ ಆರೋಪಿಗಳು ಇಬ್ಬರನ್ನು ಅವರ ರೂಮಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಹಾಡಿಸಿದ್ದಾರೆ. ಗಡ್ಡವನ್ನು ಬೋಳಿಸಿದ್ದಾರೆ. ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. 270 ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೆಲ್ಮೆಟ್ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಅಮಲ್ ಗಿರೀಶ್ ಪೊಲೀಸರಿಗೆ ದೂರು ನೀಡಿದ್ದರು. ಪಾಂಡೇಶ್ವರ ಠಾಣಾ ಇನ್ಸ್ಪೆಕ್ಟರ್ ಲೋಕೇಶ್ ಎ.ಸಿ. ಹಾಗು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್ಐ ಶೀತಲ್ ಅಲಗೂರ್ ಅವರು ಸಿಬ್ಬಂದಿ ಜತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

11 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

12 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

12 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

12 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago