ಮಂಗಳೂರು :ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ತಮ್ಮ ಅಪಾರ್ಟ್ ಮೆಂಟ್ ನ ಕೊಠಡಿಯಲ್ಲಿ ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ, ಹಣ ನೀಡುವಂತೆ ಪೀಡಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿ ರ್‍ಯಾಗಿಂಗ್ ನಡೆಸಿದ ಆರೋಪದಲ್ಲಿ 9 ಮಂದಿಯನ್ನು ಪಾಂಡೇಶ್ವರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತರನ್ನು ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಎಂದು ಗುರುತಿಸಲಾಗಿದ್ದು, ಬಂಧಿತರಲ್ಲಿ 7 ಮಂದಿ ಬೇರೊಂದು ಕಾಲೇಜಿನ ವಿದ್ಯಾರ್ಥಿಗಳು , ಓರ್ವ ಸಂತ್ರಸ್ತ ವಿದ್ಯಾರ್ಥಿಗಳ ಸೀನಿಯರ್ ಹಾಗೂ ಮತ್ತೋರ್ವ ಬಂಧಿಸಲ್ಪಟ್ಟವರು.
ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ ಅಮಲ್ ಗಿರೀಶ್ ಅವರು ಸ್ನೇಹಿತ ಕಾರ್ತಿಕ್ ವಿಜಯನ್ ಜತೆ ಅಪಾರ್ಟ್‌ಮೆಂಟ್ ಗೆ ತೆರಳುತ್ತಿದ್ದ ಸಂದರ್ಭ ಆರೋಪಿಗಳು ಇಬ್ಬರನ್ನು ಅವರ ರೂಮಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಹಾಡಿಸಿದ್ದಾರೆ. ಗಡ್ಡವನ್ನು ಬೋಳಿಸಿದ್ದಾರೆ. ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. 270 ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೆಲ್ಮೆಟ್ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಅಮಲ್ ಗಿರೀಶ್ ಪೊಲೀಸರಿಗೆ ದೂರು ನೀಡಿದ್ದರು. ಪಾಂಡೇಶ್ವರ ಠಾಣಾ ಇನ್ಸ್ಪೆಕ್ಟರ್ ಲೋಕೇಶ್ ಎ.ಸಿ. ಹಾಗು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್ಐ ಶೀತಲ್ ಅಲಗೂರ್ ಅವರು ಸಿಬ್ಬಂದಿ ಜತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…