ಮಂಗಳೂರು : ತಾನು ವಾಸವಾಗಿದ್ದ ಅಪಾರ್ಟ್‌ಮೆಂಟಿನ ಬಾಡಿಗೆ ಪ್ಲ್ಯಾಟ್ ನಲ್ಲಿ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಅತ್ತಾವರ ಮಂಜುಶೆಟ್ಟಿ ಕಾಂಪೌಂಡಿನಲ್ಲಿ ಅ.25 ರ ಶುಕ್ರವಾರ ತಡರಾತ್ರಿ ನಡೆದಿದೆ.
ವಿದ್ಯಾರ್ಥಿನಿಯನ್ನು ಕೇರಳ ಮೂಲದ ಅನುಪಮಾ (23) ಎಂದು ಗುರುತಿಸಲಾಗಿದೆ. . ವಿದ್ಯಾರ್ಥಿನಿಯು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದಳು. ಆದರೆ, ತಾನು ತಂಗಿದ್ದ ಪಿಜಿಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಶುಕ್ರವಾರ ರಾತ್ರಿ ಆಕೆಯ ಮೃತದೇಹ ಪತ್ತೆಯಾಗಿದೆ.
ಅನುಪಮಾ ತಾಯಿ ವಿದೇಶದಲ್ಲಿದ್ದು, ಈಕೆ ಈ ಅಪಾರ್ಟ್‌ಮೆಂಟಿನಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯ ಹೂಡಿದ್ದಳು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರೇಮ ವೈಫಲ್ಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…