Featured

ಮಂಗಳೂರು : ನಳಿನ್ ಲವ್ ಜಿಹಾದ್ ಹೇಳಿಕೆ ಬಿಜೆಪಿ ಮತ್ತು ಸಂಘಪರಿವಾರದ ನೈಜ ಹಿಡನ್ ಅಜೆಂಡಾವನ್ನು ತೋರ್ಪಡಿಸಿದೆ : SDPI – VIshwanews24

ನಳಿನ್ ಲವ್ ಜಿಹಾದ್ ಹೇಳಿಕೆ ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತಾಗಿದೆ..

ಬಿಜೆಪಿ ಯಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂಬ ವಾಸ್ತವವನ್ನು ಬಹಿರಂಗ ಪಡಿಸಿದೆ..

ಮಂಗಳೂರು: ರಸ್ತೆ ಚರಂಡಿ ಅಭಿವೃದ್ಧಿ ವಿಷಯ ಬಿಟ್ಟು ಬಿಡಿ ಲವ್ ಜಿಹಾದ್ ಕಡೆಗೆ ಗಮನ ಕೊಡಿ ಎಂಬ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯು ಬಿಜೆಪಿ ಮತ್ತು ಸಂಘಪರಿವಾರದ ನೈಜ ಹಿಡನ್ ಅಜೆಂಡಾವನ್ನು ತೋರ್ಪಡಿಸಿ ಬಿಜೆಪಿ ಯಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂಬ ವಾಸ್ತವವನ್ನು ಬಹಿರಂಗ ಪಡಿಸಿದೆ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಗೊಳಿಸಿರುವ ಅವರು ಬಿಜೆಪಿ ಸಂಘಪರಿವಾರ ತನ್ನ ಹುಟ್ಟಿನಿಂದಲೇ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ದೇಶದ ನೈಜ ಸಮಸ್ಯೆಗಳನ್ನು ಮತ್ತು ಅಭಿವೃದ್ಧಿಯ ವಿಚಾರದಲ್ಲಿ ಆಸಕ್ತಿ ವಹಿಸದೆ ಜನರನ್ನು ಪರಸ್ಪರ ಧರ್ಮಾಧಾರಿತವಾಗಿ ವಿಭಜಿಸಿ ಆ ಮೂಲಕ ಕೋಮು ಗಲಭೆ ನಡೆಸಿ ಸಾರ್ವಜನಿಕ ಆಸ್ತಿ ಪಾಸ್ತಿ ಹಾಗೂ ಜನರ ಪ್ರಾಣ ಹಾನಿ ಮಾಡುವುದರಲ್ಲೇ ದಿನ ಕಳೆಯುತ್ತಿದೆ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಧರ್ಮದ ವಿಚಾರಗಳನ್ನು ಮುನ್ನೆಲೆಗೆ ತಂದೇ ಅಧಿಕಾರ ಪಡೆದು ತಮ್ಮ ಕೋಮು ವೈಷಮ್ಯವನ್ನು ಇನ್ನಷ್ಟು ಅಧಿಕಗೊಳಿಸಿದ್ದಾರೆ ಎಂದು ಕಿಡಿಕಾರಿದರು.

ಈಗ ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತಾಗಿದ್ದು, ಅಧಿಕಾರ ಚಲಾಯಿಸಲು ತಿಳಿಯದೆ ಅಭಿವೃದ್ಧಿ ವಿಚಾರಗಳನ್ನು ಬಿಟ್ಟು ಜನರನ್ನು ಭಾವನಾತ್ಮಕ ವಿಚಾರಗಳಿಗೆ ಪ್ರೋತ್ಸಾಹ ನೀಡಿ ಪರಸ್ಪರ ಗಲಭೆ ನಡೆಸುವ ಸಂಘಪರಿವಾರದ ಹಿಡನ್ ಅಜೆಂಡಾದ ಭಾಗವಾಗಿದೆ ಸಂಸದ ಕಟೀಲ್ ರವರ ಹೇಳಿಕೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ ಜಿಲ್ಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಇರುವುದರಿಂದ ಹಾಗೂ ಸ್ವಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಇವರ ವಿರುದ್ಧ ಇರುವುದರಿಂದ ಸಂಘಪರಿವಾರದ ಮುಖಂಡರ ಮನವೊಲಿಸಲು ಇಂತಹ ವಿಭಜನಕಾರಿ ಹೇಳಿಕೆ ನೀಡಿ ಟಿಕೆಟ್ ಪಡೆಯಲು ಪ್ರಯತ್ನಿಸುತ್ತಿರುವುದು ಜನರಿಗೆ ಅರ್ಥವಾಗದ ವಿಚಾರವೇನಲ್ಲ ಎಂದು ಅವರು ಹೇಳಿದ್ದಾರೆ.

ದ.ಕ ಪೋಲಿಸ್ ಇಲಾಖೆಯು ಏನು ಮಾಡುತ್ತಿದೆ. ಒಂದು ವೇಳೆ ಇಂತಹ ಹೇಳಿಕೆಯನ್ನು ಇತರ ಧರ್ಮದ ನಾಯಕರು ನೀಡಿರುತ್ತಿದ್ದರೆ ಕೂಡಲೇ ಕ್ರಮ ಕೈಗೊಳ್ಳುತ್ತಿರಲಿಲ್ಲವೇ? ನ್ಯಾಯದಲ್ಲಿ ತಾರತಮ್ಯ ಮಾಡುವ ಪೋಲಿಸ್ ಇಲಾಖೆಯ ಕ್ರಮವೂ ಖಂಡನೀಯ. ಪೊಲೀಸ್ ಇಲಾಖೆ ಕೂಡಲೇ ಇವರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

8 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

9 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

10 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

11 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

11 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

12 hours ago