ಮಂಗಳೂರು: ಮಗು ಮಾರಾಟ ಜಾಲವೊಂದನ್ನು ಭೇದಿಸಿದ ಮಂಗಳೂರು ಪೊಲೀಸರು ಐದು ತಿಂಗಳ ಹೆಣ್ಮಗುವನ್ನು ರಕ್ಷಿಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸ್ ಆಯುಕ್ತ ಶಶಿಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಮುಲ್ಕಿಯ ರೈಹಾನ್ (30) ಎಂಬಾತ ಬಂಧಿತ ಆರೋಪಿಯಾಗಿದ್ದು, ಮಗುವನ್ನು ಮಾರಾಟ ಮಾಡಿದ ಮತ್ತು ಸ್ವೀಕರಿಸಿದವರ ವಿರುದ್ಧ ತನಿಖೆ ನಡೆಸಲಾಗುವುದು ಎಂದರು.
ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ್ದ ಆರೋಪಿ ರೈಹಾನ್ ಮಗುವೊಂದು ಮಾರಾಟಕ್ಕಿವೆ. ಬೇಕಿದ್ದರೆ ತಿಳಿಸಿ ಎಂದಿದ್ದ. ಅಲ್ಲದೆ ತಾನು ಈ ಹಿಂದೆ ಮಗು ಮಾರಾಟ ಮಾಡಿದ್ದೇನೆ. ಗಂಡು ಮಗುವಿಗೆ 6 ಲಕ್ಷ ರೂ.ಮತ್ತು ಹೆಣ್ಣು ಮಗುವಿಗೆ 4 ಲಕ್ಷ ರೂ. ನೀಡಬೇಕು. ಮುಂಗಡ ಹಣ ನೀಡಿದ ಒಂದುವರೆ ತಿಂಗಳೊಳಗೆ ಮಗುವನ್ನು ಕೊಡುವುದಾಗಿ ತಿಳಿಸಿದ್ದ. ಅದರಂತೆ ಒಡನಾಡಿ ಸಂಸ್ಥೆಯ ಸಿದ್ದಾರ್ಥ್ ಮತ್ತು ದೀಕ್ಷಿತ್ ಎಂಬವರು ಮಂಗಳೂರಿಗೆ ಆಗಮಿಸಿ ರೈಹಾನ್‌ನನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಅದರಂತೆ ಪಾಂಡೇಶ್ವರ ಎಸ್ಸೈ ಶೀತಲ್ ನೇತೃತ್ವದಲ್ಲಿ ಪೊಲೀಸ್ ತಂಡವನ್ನೂ ರಚಿಸಲಾಗುತ್ತದೆ. ಹಾಗೇ ಆರೋಪಿ ರೈಹಾನ್‌ನನ್ನು ಸಂಪರ್ಕಿಸಿ ಮಾತುಕತೆಗೆ ಕರೆದು ಬಳಿಕ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24
ಆರೋಪಿ ಈ ಹಿಂದೆಯೂ ಹಲವು ಮಕ್ಕಳನ್ನು ಮಾರಾಟ ಮಾಡಿದ್ದಾನೆ ಎನ್ನಲಾಗಿದೆ. ಮುಲ್ಕಿಯಲ್ಲಿ ಕೋಳಿ ಮಾರಾಟದ ಅಂಗಡಿ, ಫ್ಯಾನ್ಸಿ ನಡೆಸುತ್ತಿದ್ದ ಈತ ಅದರ ಮಧ್ಯೆ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಹಾಸನದ ದಂಪತಿಯಿಂದ ಹೆಣ್ಮಗುವನ್ನು 3 ಲಕ್ಷಕ್ಕೆ ಪಡೆದ ಈತ ಕಾರ್ಕಳ ಮೂಲದ ಕವಿತಾ ಎಂಬವರಿಗೆ 6 ಲಕ್ಷ ರೂ,ಗೆ ಮಾರಾಟ ಮಾಡಿದ್ದಾನೆ. ಇದೀಗ ಮಗುವನ್ನು ರಕ್ಷಿಸಲಾಗಿದೆ. ಮಗು ಮಾರಾಟ ಮಾಡಿದ ಮತ್ತು ಮಗುವನ್ನು ಪಡೆದವರನ್ನು ವಿಚಾರಣೆ ನಡೆಸಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಉಡುಪಿಯ MGM ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಪುಸ್ತಕೋತ್ಸವ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…