Featured

ಮಂಗಳೂರು  : ನವಜಾತ ಶಿಶುವನ್ನು ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಪೋಷಕರು – Vishwanews24

ಮಂಗಳೂರು  : ನವಜಾತ ಶಿಶುವನ್ನು ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಹೆತ್ತವರು

ಮಂಗಳೂರು : ನವಜಾತ ಶಿಶು ಮಗುವನ್ನು ಹೆತ್ತವರು ರಸ್ತೆಯಲ್ಲೇ ಬಿಟ್ಟು ಹೋದ ಘಟನೆ ಸ್ಟೇಟ್‌ಬ್ಯಾಂಕ್‌ ಸಮೀಪದ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಮಗುವನ್ನು ವೆನ್ಲಾಕ್‌ನ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಂಡು ಮಗು ಇದಾಗಿದ್ದು, ಜನಿಸಿ ಸುಮಾರು 1 ವಾರ ಕಾಲ ಆಗಿದೆ ಎಂದು ಹೇಳಲಾಗಿದ್ದು, ಲೈಟ್ ಕಂಬದ ಬುಡದಲ್ಲಿ ಮಗು ಇರುವುದನ್ನು ನೋಡಿದ ಬಸ್ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗು ಪತ್ತೆಯಾದ ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ಲೇಡಿಗೋಷನ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ತಪಾಸಣೆ ನಡೆಸಿ ವೆನ್ಲಾಕ್‌ ಗೆ ದಾಖಲಿಸಲಾಗಿದೆ. ಮಗುವಿನ ಆರೋಗ್ಯ ಸ್ಥಿರವಾಗಿರದ ಕಾರಣ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆತ್ತವರು ಬಿಟ್ಟು ಹೋಗಿರುವ ಮಗುವಿನ ಆರೋಗ್ಯದಲ್ಲಿ ಏರುಪೇರು ಇದ್ದು, ತಲೆಯಲ್ಲಿ ಸಣ್ಣ ಪುಟ್ಟ ಗಾಯಗಳಿವೆ. ಪತ್ತೆಯಾದ ವೇಳೆ ಮೂಗಿಗೆ ಟ್ಯೂಬ್‌ ಹಾಕಿದ ಸ್ಥಿತಿಯಲ್ಲಿತ್ತು. ಫಿಟ್ಸ್‌ ಕೂಡಾ ಇರುವುದು ತಿಳಿದು ಬಂದಿದೆ. ಮಧ್ಯಾಹ್ನದ ವೇಳೆ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ಒಬ್ಬ ಗಂಡಸು ಹಾಗೂ ಹೆಂಗಸಿನೊಂದಿಗೆ ಈ ಮಗುವನ್ನು ಸ್ಥಳೀಯರು ನೋಡಿದ್ದು ಮಗುವನ್ನು ಯಾರು ಬಿಟ್ಟು ಹೋಗಿದ್ದಾರೆ ಎನ್ನುವ ಕುರಿತಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

15 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

16 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

16 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

16 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

17 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

18 hours ago