ಮಂಗಳೂರು : ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ.ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು.
ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ.
ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು ಎಂದು ಹೇಳಿದರು.
ತೆಲಂಗಾಣ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮುಸ್ಲಿಂ ಸ್ಪೀಕರ್ ಮುಂದೆ ಬಿಜೆಪಿಯವರು ನಮಸ್ಕಾರ ಸಾಬ್ ಎಂದು ಕೈ ಮುಗಿಯುತ್ತಾರೆ ಎಂದು ಜಮೀರ್ ಅಹಮದ್ ಹೇಳಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…