ಮಂಗಳೂರು: ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದರ ವಿರೋಧಿಯೂ ಅಲ್ಲ. ನಮ್ಮದು ಬಹುಸಂಸ್ಕೃತಿ ಇರುವ ರಾಷ್ಟ್ರ, ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇರೋನು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ. ನಾವು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರು. ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೇವೆ ಎಂದರು.
ಶಾಲೆಗಳಲ್ಲಿ ಭಗವದ್ಗೀತೆ ಕಲಿಸೋ ಬಗ್ಗೆ ಚಿಂತನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನೈತಿಕ ಶಿಕ್ಷಣ ಕಲಿಸಲು ನಮ್ಮ ಯಾವುದೇ ತಕರಾರು ಇಲ್ಲ. ನಾವು ಸಂವಿಧಾನದ ಜಾತ್ಯಾತೀತ ತತ್ವಗಳನ್ನು ನಂಬುತ್ತೇವೆ. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನು ಹೇಳಿಕೊಟ್ಟರೂ ನಮ್ಮ ವಿರೋಧ ಇಲ್ಲ. ಆದರೆ ಮಕ್ಕಳಿಗೆ ಅಗತ್ಯವಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.
ಭಗವದ್ಗೀತೆ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ, ಗುಜರಾತ್‍ನಲ್ಲಿ ಮಾಡಿದ್ದಾರೆ ಅಷ್ಟೇ. ಭಗವದ್ಗೀತೆ ಮನೆಯಲ್ಲಿ ಹೇಳಿಕೊಡ್ತಾರೆ, ದೇವರ ಬಗ್ಗೆ ಹೇಳ್ತಾರೆ. ರಾಮಾಯಣ, ಮಹಾಭಾರತ ಎಲ್ಲಾನೂ ಮನೆಯಲ್ಲಿ ಹೇಳಿ ಕೊಡ್ತಾರೆ. ನೈತಿಕ ಶಿಕ್ಷಣ ಬೇಕು, ಆದರೆ ಸಂವಿಧಾನಕ್ಕೆ ವಿರುದ್ಧವಾಗಿ ಯಾವುದೂ ನಡೆಯಬಾರದು ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…