ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರಿನ ಮೇಲೆ ಹಲ್ಲೆ ಪ್ರಕರಣ ಘಟನೆಯ ಬಗ್ಗೆ ಶಾಸಕ ಹರೀಶ್ ಪೂಂಜಾ ಮಾಹಿತಿ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಹರೀಶ್ ಪೂಂಜಾ ರಾತ್ರಿ ಬೆಂಗಳೂರಿನಿಂದ ಬಂದು ಬೆಳ್ತಂಗಡಿ ಹೋಗುತ್ತಿರುವಾಗ ಸುಮಾರು 11 ಗಂಟೆ ವೇಳೆ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ನಾನು ನನ್ನ ಸ್ನೇಹಿತನ ಕಾರಿನಲ್ಲಿದ್ದೆ, ದಾಳಿ ನಡೆಸಲು ಬಂದಿದ್ದ ಕಾರು ಚಾಲಕ ಮೊದಲು ನನ್ನ ಇನ್ನೋವಾ ಕಾರಿಗೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಆ ಕಾರಿನಲ್ಲಿ ನಾನು ಇಲ್ಲದ ಕಾರಣ ಮತ್ತೆ ನಾನಿದ್ದ ಹುಂಡೈ I 20 ಕಾರಿನ ಮೇಲೆ ಹಲ್ಲೆ ನಡೆಸಿದ್ದಾನೆ.
ಕಾರಿನ ಗಾಜಿನ ಮೇಲೆ ಹ್ಯಾಂಡಲ್ ಇರುವ ತಲುವಾರು ಮೂಲಕ ಹೊಡೆದಿದ್ದಾನೆ. ಈ ವಿಚಾರವನ್ನು ತಕ್ಷಣವೇ ಬಂಟ್ವಾಳ ಡಿವೈಎಸ್ಪಿ ಗಮನಕ್ಕೆ ತಂದಿದ್ದೇನೆ, ಗೃಹ ಸಚಿವರೂ ನನ್ನ ಬಳಿ ಈ ವಿಚಾರವಾಗಿ ಚರ್ಚಿಸಿದ್ದಾರೆ. ಭದ್ರತೆಗೆ ವ್ಯವಸ್ಥೆ ಮಾಡುವ ಭರವಸೆಯನ್ನೂ ನೀಡಿದ್ದಾರೆ. ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ ಇದಕ್ಕಾಗಿ ಜಿಹಾದಿ ಶಕ್ತಿಗಳು ನನ್ನ ಮೇಲೆ ಹಗೆ ಸಾಧಿಸುವ ಸಾಧ್ಯತೆಯಿದೆ, ಯಾವುದೇ ಕಾರಣಕ್ಕೂ ಹಿಂದುತ್ವದ ವಿಚಾರದಲ್ಲಿ ರಾಜಿಯಿಲ್ಲ ಎಂದಿದ್ದಾರೆ.
ಕೇರಳ ನೊಂದಣಿಯ ಕಾರು ಚಾಲಕ ಈ ಕೃತ್ಯ ವೆಸಗಿದ್ದು, ಈಗಾಗಲೇ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಕಾರಿನ ನಂಬರ್ ನೀಡಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…