ಮಂಗಳೂರು: ವರ್ಷದ ಹಿಂದೆ ಮೀನುಗಾರಿಕೆಗೆಂದು ಆಳಸಮುದ್ರಕ್ಕೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿದ್ದು ಅದರಲ್ಲಿ ಇದ್ದ ಮೀನುಗಾರರ ಕುಟುಂಬಕ್ಕೆ ಹೆಚ್ಚಿನ ಮೊತ್ತದ ಪರಿಹಾರ ಒದಗಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲು ಮತ್ತು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಇವರ ನೇತೃತ್ವದಲ್ಲಿ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಇವರ ಮೀನುಗಾರರ ನಿಯೋಗವು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಿಗೆ ಮನವಿ ಸಲ್ಲಿಸಿತು.
ಮಂಗಳೂರಿನಲ್ಲಿ ನಡೆದ ಸಿಎಎ ಸಮರ್ಥನಾ ಸಮಾವೇಶದಲ್ಲಿ ಈ ಬಗ್ಗೆ ಮನವಿ ಮಾಡಲಾಗಿದ್ದು ಈ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮೀನುಗಾರಿಕಾ ಫೆಡರೇಷನ್ ಇದರ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಹಾಗೂ ಮೀನುಗಾರ ಮುಖಂಡರಾದ ಸತೀಶ್ ಕುಂದರ್, ರವಿರಾಜ್ ಸುವರ್ಣ, ಹರೀಶ್ ಕುಂದರ್, ಪಾಂಡುರಂಗ ಕೋಟ್ಯಾನ್, ಗೋಪಾಲ್ ಆರ್,ಕೆ, ಹಾಗೂ ಸಂತ್ರಸ್ತ ಮೀನುಗಾರ ಕುಟುಂಬಿಕರು ಉಪಸ್ಥಿತರಿದ್ದರು. ಮನವಿಗೆ ಸ್ಪಂದಿಸಿದ ಸಚಿವರು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…