ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕು ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಜುಲೈ 29ರ ಮಧ್ಯರಾತ್ರಿ 12 ಗಂಟೆಯವರೆಗೆ ಮುಚ್ಚಲು ದ.ಕ. ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಆದೇಶಿಸಿದ್ದಾರೆ.
ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈಗಾಗಲೇ ಬೆಳ್ಳಾರೆ ಸಹಿತ ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಕಡಬ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾ ಪ್ತಿಯಲ್ಲಿ ಪರಿಸ್ಥಿತಿ ಪ್ರಕ್ಷುಬ್ದವಾಗಿದ್ದು, ಇದು ಬೇರೆ ಸ್ಥಳಗಳಿಗೂ ಪ್ರಸರಿಸುವ ಸಾಧ್ಯತೆ ಇದೆ. ಹೀಗಾಗಿ ಮದ್ಯಪಾನ ಮಾಡುವ ಮೂಲಕ ಸಾರ್ವಜನಿಕ ಶಾಂತಿ ಭಂಗ ಮತ್ತು ಕಾನೂನು ಸುವ್ಯವಸ್ಥೆಗೆ ತೊಡಕುಂಟಾಗುವ ಸಾಧ್ಯತೆಯನ್ನು ಮನಗಂಡು ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜುಲೈ 27ರ ಮಧ್ಯರಾತ್ರಿ 12 ಗಂಟೆಯಿಂದಲೇ ಅನ್ವಯವಾಗುವಂತೆ ಜುಲೈ 29ರ ಮಧ್ಯರಾತ್ರಿ 12 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ/ದಾಸ್ತಾನು, ಸಾಗಾಣಿಕೆಯನ್ನು ಮಾಡುವಂತಿಲ್ಲ ಎಂದು ಅವರು ಸೂಚಿಸಿದ್ದಾರೆ.
ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಮುಚ್ಚಬೇಕು. ನಿಷೇದಾಜ್ಞೆ ಸಮಯದಲ್ಲಿ ಬಾರ್/ವೈನ್ ಶಾಪ್‌ಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಸೀಲುಗಳನ್ನು ಕಡ್ಡಾಯವಾಗಿ ಹಾಕಬೇಕು ಎಂದು ಅಬಕಾರಿ ಉಪ ಆಯಕ್ತರಿಗೆ ಇದೇ ವೇಳೆ ಅವರು ಸೂಚನೆ ನೀಡಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…