ಮಂಗಳೂರು : ರಾಜ್ಯವಿಧಾನ ಸಭೆ ಮತದಾನ ಮುಗಿದಿದ್ದು ಇನ್ನೇನಿದ್ದರೂ ಫಲಿತಾಂಶದದ್ದೇ ಕುತೂಹಲ. ಈ ಸಂದರ್ಭಗಳಲ್ಲಿ ಜ್ಯೋತಿಷಿಗಳ ಭವಿಷ್ಯದ ನುಡಿ, ಲೆಕ್ಕಾಚಾರಗಳಿಗೆ ಡಿಮ್ಯಾಂಡ್ ಇದ್ದೇ ಇರುತ್ತದೆ. ಈ ನಡುವೆ ಖ್ಯಾತ ವಿಚಾರವಾದಿ ಪ್ರೊ.ನರೇಂದ್ರ ನಾಯಕ್ ಜ್ಯೋತಿಷಿಗಳಿಗೆ ನೇರ ಸವಾಲು ಹಾಕಿದ್ದಾರೆ.
ವಿಧಾನಸಭೆಯ ಚುನಾವಣೆಯ ಫಲಿತಾಂಶದ ನಿಖರವಾಗಿ ಭವಿಷ್ಯ ನುಡಿದು ಅವರ ಹೇಳಿಕೆ, ಲೆಕ್ಕಾಚಾರ ಸರಿಯಾದರೆ ಅಂತಹ ಜ್ಯೋತಿಷಿಗಳಿಗೆ 10 ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ನರೇಂದ್ರ ನಾಯಕ್ ಘೋಷಿಸಿದ್ದಾರೆ. ಈಗಾಗಲೇ 20ಕ್ಕೂ ಹೆಚ್ಚು ಜ್ಯೋತಿಷಿಗಳು ಅಂಚೆ ಮೂಲಕ ಫಲಿತಾಂಶದ ಉತ್ತರ ಬರೆದು ಕಳುಹಿಸಿದ್ದಾರೆ.
ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವ ನರೇಂದ್ರ ನಾಯಕ್ ಕಳೆದ ಮೂವತ್ತು ವರ್ಷಗಳಿಂದ ಜ್ಯೋತಿಷಿಗಳಿಗೆ ಈ ಸವಾಲನ್ನು ಹಾಕುತ್ತಲೇ ಇದ್ದಾರೆ. ಆದರೆ ಯಾವೊಬ್ಬ ಜ್ಯೋತಿಷಿಯು ಈವರೆಗೆ ಸವಾಲನ್ನು ಯಶಸ್ವಿಯಾಗಿ ಪೂರೈಸಿಲ್ಲ. ನಾನು ಕೇಳಿರುವ 20 ಪ್ರಶ್ನೆಗಳಲ್ಲಿ 19 ಪ್ರಶ್ನೆಗಳಿಗೆ ನಿಖರ ಉತ್ತರ ನೀಡಿದರೂ 10 ಲಕ್ಷ ರೂ. ಬಹುಮಾನ ನೀಡುತ್ತೇನೆ ಎಂದು ಹೇಳಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…