ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯ ವತಿಯಿಂದ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ವಾಹನಗಳಲ್ಲಿ ನಿಯಮಬಾಹಿರವಾಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ವಾಹನಗಳ ವಿರುದ್ಧ ವಿಶೇಷ ತಪಾಸಣೆ ನಡೆಸಿ ಪ್ರಕರಣ ದಾಖಲಿಸಲಾಗಿದೆ.
ಈ ಕಾರ್ಯಾಚರಣೆಯ ಸಂದರ್ಭದಲ್ಲಿ ನಿಯಮಬಾಹಿರವಾಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಸುಮಾರು 30 ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಬಂಧಪಟ್ಟ ವಾಹನಗಳ ಮಾಲೀಕರಿಗೆ ವಾಹನಗಳ ನೋಂದಣಿಯನ್ನು ಅಮಾನತುಗೊಳಿಸಬಾರದು ಎಂಬುದಕ್ಕೆ ಕಾರಣಗಳನ್ನು ತಿಳಿಸುವಂತೆ ನೋಟಿಸ್ಗಳನ್ನು ಜಾರಿಗೊಳಿಸಲಾಗಿದೆ.
ಶಾಲಾ ಮಕ್ಕಳ ಸುರಕ್ಷತೆ ಸಾರಿಗೆ ಇಲಾಖೆಯ ಪ್ರಮುಖ ಆದ್ಯತೆಯಾಗಿದ್ದು, ನಿಯಮಬಾಹಿರವಾಗಿ ಮಕ್ಕಳನ್ನು ಸಾಗಿಸುವ ವಾಹನಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ತಪಾಸಣೆ ಹಾಗೂ ಜಾರಿ ಕಾರ್ಯಾಚರಣೆ ಮುಂದುವರಿಸಲಾಗುತ್ತದೆ ಎಂದು ಮಂಗಳೂರು ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…
ಉಡುಪಿ: ಅ. 17 ರಂದು ನೇರ ಸಂದರ್ಶನ ಉಡುಪಿ: ನಗರದ ಗ್ರೋಸ್ಪೆöÊರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ,…