ಮಂಗಳೂರು: ನಿಯಮ ಮೀರಿ ಧ್ವನಿವರ್ಧಕ ಬಳಕೆಗೆ ತಡೆ ನೀಡಲಾಗುತ್ತಿದ್ದು, ಮಂಗಳೂರಿನಲ್ಲಿ 1001 ಸ್ಥಳಗಳಿಗೆ ನೋಟೀಸು ನೀಡಲಾಗಿದೆ ಎಂದು ಮಂಗಳೂರು ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಕಮಿಷನರ್ ಶಶಿಕುಮಾರ್, 357 ದೇವಸ್ಥಾನ, 168 ಮಸೀದಿ, 95 ಚರ್ಚ್, 106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳಗಳು, 98 ಮನರಂಜನಾ ಸ್ಥಳ ಸೇರಿದಂತೆ 1001 ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮಾಡಲಾಗುತ್ತಿದೆ. ಇವುಗಳಲ್ಲಿ ನಿಯಮ ಪಾಲನೆ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ವಿವಿಧ ಸ್ಥಳ ಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಯಮವಿದೆ. ಬಹುತೇಕ ಉಲ್ಲಂಘನೆಯಾಗಿರುವ ಮಾಹಿತಿ ಇದೆ.
ಈ ಹಿನ್ನೆಲೆಯಲ್ಲಿ ಸರಕಾರ ಹಾಗೂ ಹೈಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಂಗಳೂರು ಕಮಿಷನರ್ ಎನ್ .ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…