ಮಂಗಳೂರು: ಬ್ಯಾಂಕ್ ಅಧಿಕಾರಿಗಳೆಂದು ನಂಬಿಸಿ ಕರೆ ಮಾಡಿ ಒಟಿಪಿ ನಂಬರ್ ಪಡೆದು ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ 6.24 ಲಕ್ಷ ರೂ. ಮೊತ್ತವನ್ನು ಲಪಟಾಯಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕರ್ನಾಟಕದಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ -Vishwanews24
ಬಂದರು ರಸ್ತೆಯಲ್ಲಿರುವ ಸ್ಟೇಟ್‌ಬ್ಯಾಂಕ್ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್ ಹೇಳುವಂತೆ ಕೋರಿದ್ದರು.
ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್‌ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು. ಸ್ವಲ್ಪ ಹೊತ್ತಿನಲ್ಲಿ ಸ್ವಲ್ಪ ಸ್ವಲ್ಪವೇ ಮೊತ್ತ ಖಾತೆಯಿಂದ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್‌ಗೆ ಎಸ್‌ಎಂಎಸ್ ಬರಲಾರಂಭಿಸಿತು. ಕೊನೆಗೆ ಎಸ್‌ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಖೋತಾ ಆಗಿತ್ತು.
ಇದರಿಂದ ದಿಗಿಲುಗೊಂಡ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ ಹೊಸದಿಲ್ಲಿಯ ನಾನಾ ಬ್ಯಾಂಕ್‌ಗಳ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಅವರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ
ಉಡುಪಿ :ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ ; ಮಾ. 15,16ಕ್ಕೆ ಬ್ಯಾಂಕ್ ಬಂದ್ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…