Featured

ಮಂಗಳೂರು:  ನೀರು ಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: 10 ಕಿ.ಮೀ ವ್ಯಾಪ್ತಿಯನ್ನ ಜಾಗೃತ ವಲಯ ಘೋಷಿಸಿದ ಜಿಲ್ಲಾಡಳಿತ..Vishwanews24

ಮಂಗಳೂರು:  ನೀರು ಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: 10 ಕಿ.ಮೀ ವ್ಯಾಪ್ತಿಯನ್ನ ಜಾಗೃತ ವಲಯ ಘೋಷಿಸಿದ ಜಿಲ್ಲಾಡಳಿತ..

ಮಂಗಳೂರು : ಮಂಗಳೂರು ನಗರದ ನೀರುಮಾರ್ಗದಲ್ಲಿ ಆಫ್ರಿಕನ್​ ಹಂದಿ ಜ್ವರ ಪತ್ತೆಯಾಗಿದ್ದು, ಇಲ್ಲಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಜಿಲ್ಲಾಡಳಿತ ಘೋಷಿಸಿದೆ.

ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ.

ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದು ಜನ ಭಯಭೀತರಾಗುವುದು ಬೇಡಾ ಎಂದು ತಿಳಿಸಿದ್ದಾರೆ.

ಈ ಹಂದಿ ಸಾಕಣೆ ಕೇಂದ್ರದಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ.

ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

India Post Office Recruitment..🌐 ಇಂಡಿಯಾ ಪೋಸ್ಟ್ ಆಫೀಸ್ ನೇಮಕಾತಿ 2022..

ಪ್ರಸ್ತುತ ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ.

ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು.

ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು.

ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡುವುದು.

ಉಡುಪಿ: ಹಾವಿನ ವಿಷ ಚುಚ್ಚಿ ಪತ್ನಿಯ ಹತ್ಯೆ ಪ್ರಕರಣ..ಆರೋಪ ಸಾಬೀತುಪಡಿಸಲು ವಿಫಲ. ಪತಿ ಸಹಿತ ಆರೋಪಿಗಳ ಖುಲಾಸೆ – Vishwanews24

ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago