ಮಂಗಳೂರು: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ – Vishwanews24

ಮಂಗಳೂರು: ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ.

ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ವೃತ್ತಿ ನಿರ್ವಹಿಸುತ್ತಿದ್ದ ಶಿಫಾಲಿ ಸಂಜೆ ಕೆಲಸ ಮುಗಿಸಿ ಎಂದಿನಂತೆ ಮನೆಗೆ ಬಂದಿದ್ದಾರೆ. ಆದರೆ, ಅದೇನಾಯ್ತೋ ಗೊತ್ತಿಲ್ಲ, ಮನೆಗೆ ಬಂದವರೇ ಕೋಣೆಗೆ ತೆರಳಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಆಕೆಯನ್ನು ರಕ್ಷಣೆ ಮಾಡುವಷ್ಟರಲ್ಲಿ ಮೃತಪಟ್ಟಿದ್ದರು.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.