Featured

ಮಂಗಳೂರು : ನೈಟ್‌ ಕರ್ಫ್ಯೂ ನಿಯಮ ಉಲ್ಲಂಘನೆ : 68 ವಾಹನಗಳ ಮೇಲೆ ಪ್ರಕರಣ ದಾಖಲು -Vishwanews24

ಮಂಗಳೂರು : ನೈಟ್‌ ಕರ್ಫ್ಯೂ ನಿಯಮ ಉಲ್ಲಂಘನೆ : 68 ವಾಹನಗಳ ಮೇಲೆ ಪ್ರಕರಣ ದಾಖಲು -Vishwanews24

ಮಂಗಳೂರು, (Vishwanews24) : ಸರ್ಕಾರ ಸೂಚನೆಯಂತೆ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನೈಟ್‌ ಕರ್ಫ್ಯೂ ಜಾರಿಯಲ್ಲಿದ್ದು ಶನಿವಾರ ರಾತ್ರಿ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 64 ದ್ವಿಚಕ್ರ ಮತ್ತು 4 ಚತುಷ್ಚಕ್ರ ವಾಹನಗಳ ಮೇಲೆ ಪ್ರಕರಣಗಳು ದಾಖಲಾಗಿವೆ.

ಹಲವು ರಸ್ತೆಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ರಚಿಸಿರುವ ಪೊಲೀಸರು ಆ ರಸ್ತೆಯಲ್ಲಿ ಯಾವುದೇ ಬಲವಾದ ಕಾರಣವಿಲ್ಲದೆ ವಾಹನದಲ್ಲಿ ಸಂಚರಿಸುತ್ತಿದ್ದವರ ವಿರುದ್ದ ಪ್ರಕರಣ ದಾಖಲಿಸಿದರು. ರಾತ್ರಿ 10 ಗಂಟೆಗೆ ನಗರ ಪೊಲೀಸ್ ಆಯುಕ್ತ ಎಸ್.ಶಶಿ ಕುಮಾರ್, ಡಿಸಿಪಿಗಳಾದ ವಿನಯ್‌ ಎ ಗೌಂಕರ್‌ ಹಾಗೂ ಹರಿರಾಮ್ ಶಂಕರ್ ಅವರು ನಗರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಇನ್ನು ಈ ನೈಟ್‌ ಕರ್ಫ್ಯೂ ವೇಳೆ ಮಾಜಿ ಸಚಿವ ಬಿ.ರಮನಾಥ್‌ ರೈ ಅವರು ಕಾರಿನಿಂದ ಇಳಿದು ಪೊಲೀಸರೊಂದಿಗೆ ಮಾತನಾಡಿ, ಪಡೀಲ್‌ ಜಂಕ್ಷನ್‌ನಲ್ಲಿ ಬ್ಯಾರಿಕೇಡ್‌ಗಳು ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಎಂದು ತಿಳಿದುಬಂದ ನಂತರ ಬ್ಯಾರಿಕೇಡ್‌ಗಳನ್ನು ಕೊಂಚ ಸರಿಸಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇನ್ನು ಪೊಲೀಸರು ಪಬ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳ ಬಗ್ಗೆ ನಿಗಾ ಇಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ, ಕರ್ಫ್ಯೂ ಉಲ್ಲಂಘನೆಯ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಚಂದ್ರ ತಿಳಿಸಿದ್ದಾರೆ. ಕರ್ಫ್ಯೂ ಬಗ್ಗೆ ತಿಳಿಯದೆ ರಾತ್ರಿ 10 ಗಂಟೆಯ ನಂತರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಲವು ವಾಹನಗಳಿಗೆ ಕೊರೊನಾ ನೈಟ್‌ ಕರ್ಫ್ಯೂ ಬಗ್ಗೆ ತಿಳಿಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದೂ ತಿಳಿಸಿದ್ದಾರೆ.

ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರು ಶನಿವಾರ ರಾತ್ರಿ ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿರುವ ಪೊಲೀಸ್ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿದರು. ಅವರು ರಾತ್ರಿ 10 ಗಂಟೆಯ ನಂತರ ಚಲಿಸುತ್ತಿದ್ದ ವಾಹನಗಳನ್ನು ನಿಲ್ಲಿಸಿ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ನೀಡಿರುವ ಸೂಚನೆಗಳನ್ನು ಅನುಸರಿಸಲು ತಿಳಿಸಿದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

13 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

13 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

13 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

13 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

14 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

14 hours ago