ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ, ಮಂಗಳೂರು ಮೂಲದ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬಯಿಯಲ್ಲಿ ಕೊನೆಯುಸಿರೆಳೆದಿದ್ದಾರೆ.
ರಘುನಂದನ್ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್ ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ತಂದೆಯೊಂದಿಗೆ ವ್ಯಾಪಾರದಲ್ಲಿ ಕೈ ಜೋಡಿಸಿದ ಅವರು ಬಳಿಕ ಮಂಗಳೂರಿನಿಂದ ತನ್ನ 14ನೇ ವಯಸ್ಸಿನಲ್ಲೇ ಬಾಂಬೆಗೆ ತೆರಳಿದರು. ಅಣ್ಣನ ಹೋಟೆಲ್ನಲ್ಲಿ ಕೆಲ ಕಾಲ ಕೆಲಸ ಮಾಡಿ ಬಳಿಕ 1984 ರಲ್ಲಿ ಕಾಮತ್ ಅವರು ತಮ್ಮ ಮೊದಲ ನ್ಯಾಚುರಲ್ಸ್ ಐಸ್ ಕ್ರೀಮ್ ಮುಂಬೈನ ಜುಹುದಲ್ಲಿ ಸ್ಥಾಪಿಸಿದರು. ಅದು ದೇಶಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ.
1984 ರಲ್ಲಿ ಕೇವಲ 4 ಮಂದಿ ಸಿಬ್ಬಂದಿ ಜತೆ ನ್ಯಾಚುರಲ್ ಐಸ್ ಕ್ರೀಂ ಸಂಸ್ಥೆಯನ್ನು ಆರಂಭಿಸಿದರು. ಪ್ರಸ್ತುತ ನ್ಯಾಚುರಲ್ ಸಂಸ್ಥೆ ದೇಶದಲ್ಲೇ ಪ್ರತಿಷ್ಠಿತ ಐಸ್ ಕ್ರೀಂ ಉದ್ಯಮವಾಗಿ ಸಾವಿರಾರು ಮಂದಿಗೆ ಉದ್ಯೋಗ ನೀಡುತ್ತಿದೆ. ದೇಶಾದ್ಯಂತ 156 ಔಟ್ ಲೆಟ್ ಹೊಂದಿದ್ದು, ವರ್ಷಕ್ಕೆ 400 ಕೋಟಿ ರೂ.ಗೂ ಅಧಿಕ ವ್ಯವಹಾರ ಮಾಡುತ್ತಿದೆ.
ಅಲ್ಪಕಾಲದ ಅಸೌಖ್ಯದಿಂದ ಮೃತರಾದ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…