Featured

ಮಂಗಳೂರು: ನ.16 ರಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ : ಡಾ.ಎಂ.ಎನ್. ರಾಜೇಂದ್ರ ಕುಮಾರ್ – vishwanews24

ಮಂಗಳೂರು: ನ.16 ರಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ : ಡಾ.ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು: “71ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು “ವಿಕಸಿತ ಭಾರತ” ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದೇ ರೀತಿಯಲ್ಲಿ ರಾಜ್ಯಮಟ್ಟದ ಏಳು ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ಮಂಗಳೂರಿನಲ್ಲಿ ನವೆಂಬರ್ 16 ರಂದು “ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ಎಂಬ ವಿಷಯದೊಂದಿಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಪೂರ್ವಾಹ್ನ 10.00 ಗಂಟೆಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಯಾಗಿದೆ“ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ. ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ“ ಎಂದು ಮಾಹಿತಿ ನೀಡಿದರು.

ನವೆಂಬರ್ 16ರಂದು ನಡೆಯುವ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ವಸ್ತುಪ್ರದರ್ಶನ ಮಳಿಗೆಗಳನ್ನು ಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಇವರು ನೆರವೇರಿಸಲಿದ್ದಾರೆ. ಸಹಕಾರ ಸಪ್ತಾಹದ ಉದ್ಘಾಟನೆಯನ್ನು ಮಾನ್ಯ ಸಹಕಾರ ಸಚಿವ ಕೆ.ಎನ್. ರಾಜಣ್ಣರವರು ನೆರವೇರಿಸಲಿರುವರು. “ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ”ವನ್ನು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ. “ಶತಮಾನೋತ್ಸವ ಪೂರೈಸಿದ ಸಹಕಾರ ಸಂಘಗಳಿಗೆ ಪುರಸ್ಕಾರ”ವನ್ನು ಶಾಸಕರು ಹಾಗೂ
ಕರ್ನಾಟಕ ಸರಕಾರದ ಮಾಜಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಇವರು ಮಾಡಲಿರುವರು ಎಂದರು.

“ಉತ್ತಮ ಸ್ವ-ಸಹಾಯ ಸಂಘಗಳಿಗೆ ಪುರಸ್ಕಾರವನ್ನು ಮಾನ್ಯ ಶಾಸಕರು ಹಾಗೂ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾದ ಜಿ.ಟಿ. ದೇವೇಗೌಡ ಇವರು ಮಾಡಲಿರುವರು. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಮಂಗಳೂರು ಲೋಕಸಭಾ ಕ್ಷೇತ್ರದ
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ನೆರವೇರಿಸಲಿರುವರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್‌   ವಹಿಸಲಿರುವರು.

“ಸಹಕಾರ ಜಾಥಾ” ಉದ್ಘಾಟನೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಇವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ। ಭರತ್ ಶೆಟ್ಟಿ ವೈ., ಕರ್ನಾಟಕ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕರು ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ ನಿ., ಮಂಗಳೂರು ಇದರ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯರುಗಳಾದ ಐವನ್ ಡಿ.ಸೋಹಾ ಹಾಗೂ ಕಿಶೋರ್ ಕುಮಾರ್ ಬೊಟ್ಯಾಡಿ ಇವರುಭಾಗವಹಿಸಲಿರುವರು. ನಬಾರ್ಡ್, ಬೆಂಗಳೂರು ಇದರ ಮುಖ್ಯ ಮಹಾಪ್ರಬಂಧಕರಾದ ಕೆ.ವಿ.ಎಸ್.ಎಸ್.ಎಲ್.ವಿ.ಪ್ರಸಾದ್ ರಾವ್, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಇದರ ಅಧ್ಯಕ್ಷರಾದ ಕೆ. ಪಿ. ಸುಚರಿತ ಶೆಟ್ಟಿ ಇವರು ಗೌರವ ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಅಜಯ್ ನಾಗಭೂಷಣ್ ಎಂ. ಎನ್., ಶ್ರೀ ಟಿ. ಎಚ್.ಎಂ. ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ, ಕಮಿಷನರ್ ಅನುಪಮ್ ಅಗರ್ ‌ವಾಲ್ ಭಾಗವಹಿಸಲಿದ್ದಾರೆ.

“ಸಹಕಾರ ಮಾಣಿಕ್ಯ ಪ್ರಶಸ್ತಿ”

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸಿ 2024ನೇ ಸಾಲಿನಿಂದ ”ಸಹಕಾರ ಮಾಣಿಕ್ಯ“ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿ ಜೊತೆಗೆ 5 ಗ್ರಾಂ. ಚಿನ್ನದ ಪದಕ, 10000 ರೂ. ನಗದು ಹಾಗೂ ಪಾರಿತೋಷಕ ನೀಡಲಾಗುವುದು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago