Featured

ಮಂಗಳೂರು : ನ.18ರಂದು ಅಖಿಲ ಭಾರತ ಸಹಕಾರ ಸಪ್ತಾಹ – vishwanews24

ಮಂಗಳೂರು : ನ.18ರಂದು ಅಖಿಲ ಭಾರತ ಸಹಕಾರ ಸಪ್ತಾಹ

ಮಂಗಳೂರು: ಭವಿಷ್ಯದ ಸಹಕಾರಿ ಚಳುವಳಿಯನ್ನು ಯಶಸ್ವಿಯಾಗಿ ಮುನ್ನಡೆಸುವ ಸಂಕಲ್ಪದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನೇತೃತ್ವದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ನ.18ರಂದು ಬೆಳಗ್ಗೆ 10ಕ್ಕೆ ನಗರದ ಉರ್ವ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ತಿಳಿಸಿದರು.

ಬ್ಯಾಂಕಿನ ಸಭಾಂಗಣದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನ.14ರಿಂದ 20ರ ವರೆಗೆ ರಾಷ್ಟ್ರಾದ್ಯಂತ ಸಹಕಾರ ಸಪ್ತಾಹ ನಡೆಯಲಿದೆ. ನ.14ರಂದು ಸಪ್ತಾಹದ ಉದ್ಘಾಟನೆ ನಡೆಯಲಿದೆ. ಏಳು ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತದೆ. ಅದರಂತೆ, ದ.ಕ. ಜಿಲ್ಲೆಯಲ್ಲಿಯೂ ವಿವಿಧ ಕಡೆಗಳಲ್ಲಿ ಸಾಕಾರಗೊಳ್ಳಲಿದೆ. ಈ ಸಂಬಂಧ ವಿವಿಧ ಕಡೆಗಳಲ್ಲಿ ಸಹಕಾರ ರಥ ಸಂಚರಿಸಲಿದೆ ಎಂದರು.

ಮಂಗಳೂರಿನ ಉರ್ವ ಮೈದಾನದಲ್ಲಿ ನ.18ರಂದು ನಡೆಯುವ ಸಹಕಾರ ಸಪ್ತಾಹದಲ್ಲಿ ವಿಶೇಷವಾದ ವಸ್ತು ಪ್ರದರ್ಶನ ಮಳಿಗೆಗಳನ್ನು ಆಯೋಜಿಸಲಾಗಿದ್ದು ವಿಧಾನಸಭೆಯ ಸ್ಪೀಕರ್‌ ಯು.ಟಿ. ಖಾದರ್‌ ಉದ್ಘಾಟಿಸಲಿದ್ದಾರೆ. ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆಯುವ ಸಹಕಾರ ಸಪ್ತಾಹದ ಉದ್ಘಾಟನೆಯನ್ನು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ನೆರವೇರಿಸಲಿದ್ದಾರೆ. ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ನೆರವೇರಿಸಲಿದ್ದಾರೆ. ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರವನ್ನು ಸಂಸದ ನಳಿನ್‌ ಕುಮಾರ್‌ ಕಟೀಲ್‌ ನೆರವೇರಿಸಲಿದ್ದಾರೆ. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ ನೆರವೇರಿಸಲಿದ್ದಾರೆ ಎಂದರು.

ಶಾಸಕರಾದ ಡಾ| ವೈ. ಭರತ್‌ ಶೆಟ್ಟಿ, ಯಶ್‌ಪಾಲ್‌ ಸುವರ್ಣ, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಸಹಕಾರ ಇಲಾಖೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌, ಸಹಕಾರ ಸಂಘಗಳ ನಿಬಂಧಕ ಕ್ಯಾ| ಡಾ| ಕೆ. ರಾಜೇಂದ್ರ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ನಗರ ಪೊಲೀಸ್‌ ಅಧಿಕಾರಿ ಅನುಪಮ್‌ ಅಗರ್ವಾಲ್‌ ಭಾಗವಹಿಸಲಿರುವರು ಎಂದರು.

ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ| ಉಮೇಶ್‌, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಪ್ರಸಾದ್‌ ಕೌಶಲ್ ಶೆಟ್ಟಿ, ಬ್ಯಾಂಕಿನ ನಿರ್ದೇಶಕರುಗಳಾದ ದೇವಿಪ್ರಸಾದ್‌ ಶೆಟ್ಟಿ ಬೆಳಪು, ಶಶಿಕುಮಾರ್‌ ರೈ ಬಾಲೊÂàಟ್ಟು, ಎಂ.ವಾದಿರಾಜ ಶೆಟ್ಟಿ, ಜೈರಾಜ್‌ ಬಿ. ರೈ, ರಾಜು ಪೂಜಾರಿ, ಸದಾಶಿವ ಉಳ್ಳಾಲ್ , ಸ್ಕ್ಯಾಡ್ಸ್‌ ಅಧ್ಯಕ್ಷ ರವೀಂದ್ರ ಕಂಬಳಿ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಲಾ ಪ್ರಕಾರದ “ಸಹಕಾರ ಜಾಥಾ’

ಡಾ|ಎಂ.ಎನ್‌. ರಾಜೇಂದ್ರ ಕುಮಾರ್‌ ಅವರು ಮಾತನಾಡಿ, ನ.18ರಂದು ಬೆಳಗ್ಗೆ 9ಕ್ಕೆ ಬ್ಯಾಂಕ್‌ ಆವರಣದಿಂದ ಉರ್ವ ಕ್ರಿಕೆಟ್‌ ಮೈದಾನದವರೆಗೆ ಭವ್ಯ ಸಹಕಾರ ಜಾಥಾ ಸಾಗಿ ಬರಲಿದೆ. 15ಕ್ಕೂ ಅಧಿಕ ವಿವಿಧ ಸಾಂಸ್ಕೃತಿಕ ಕಲಾ ಪ್ರಕಾರದ ಸಹಕಾರಿ ಟ್ಯಾಬ್ಲೋಗಳು ಜಾಥಾದಲ್ಲಿ ಪಾಲ್ಗೊಳ್ಳಲಿವೆ. ಶಾಸಕ ವೇದವ್ಯಾಸ ಕಾಮತ್‌ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago