ಮಂಗಳೂರು: ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದ ಇವರು ಸೋಮವಾರ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ರೂಮ್ ಪಡೆದಿದ್ದರು. ಅವರ ರೂಮ್ ನಿಂದ ಮೊಬೈಲ್ ಪೋನ್ ನಿರಂತರವಾಗಿ ರಿಂಗ್ ಆಗುತ್ತಿರುವುದನ್ನು ಗಮನಿಸಿದ ಲಾಡ್ಜ್ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳಕ್ಕೆ ಭೇಟಿ ಪರಿಶೀಲಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಸಿಸಿಟಿವಿಯಲ್ಲಿ ರೂಂ ಗೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಬಂದಿರುವುದು ದಾಖಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ಮುಂದುವರಿದಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…