Featured

ಮಂಗಳೂರು: ಪಂಪ್‌ವೆಲ್‌ -ಕಂಕನಾಡಿ ರಸ್ತೆ ಕಾಮಗಾರಿ ;  ಏಪ್ರಿಲ್‌ 15ರವರೆಗೆ ಬದಲಿ ಮಾರ್ಗದ ವ್ಯವಸ್ಥೆ  – vishwanews24

ಮಂಗಳೂರು: ಪಂಪ್‌ವೆಲ್‌ -ಕಂಕನಾಡಿ ರಸ್ತೆ ಕಾಮಗಾರಿ ;  ಏಪ್ರಿಲ್‌ 15ರವರೆಗೆ ಬದಲಿ ಮಾರ್ಗದ ವ್ಯವಸ್ಥೆ

ಮಂಗಳೂರು : ನಗರದ ಪಂಪ್‌ವೆಲ್‌ ಸರ್ಕಲ್‌ನಿಂದ ಕಂಕನಾಡಿ ಬೈಪಾಸ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ 2026ರ ‌ಏಪ್ರಿಲ್ 15 ರವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.

ಪಂಪ್‌ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್‌ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಮಯದಲ್ಲಿ ದ್ವಿ-ಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್‌ನಿಂದ ಪಂಪ್‌ವೆಲ್ ವರೆಗೆ ವಾಹನಗಳು ಸಂಚರಿಸಲು ತಾತ್ಕಾಲಿಕವಾಗಿ ಏಕಮಖ ರಸ್ತೆಯನ್ನಾಗಿ ಘೋಷಿಸಿದೆ.

ಅದೇ ರೀತಿ ಪಂಪ್‌ವೆಲ್‌ನಿಂದ ಕಂಕನಾಡಿ ಓಲ್ಡ್ ರಸ್ತೆ – ಕಂಕನಾಡಿ ಜಂಕ್ಷನ್‌ ರಸ್ತೆಯನ್ನು ತಾತ್ಕಾಲಿಕವಾಗಿ ಏಕಮುಖ ರಸ್ತೆಯನ್ನಾಗಿ ಘೋಷಿಸಿದೆ. ಏಕಮುಖ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.

ಪಡೀಲ್‌ ಹಾಗೂ ತೊಕ್ಕೊಟ್ಟು ಕಡೆಯಿಂದ ಪಂಪ್‌ವೆಲ್‌ ವೃತ್ತಕ್ಕೆ ಬಂದು ಕರಾವಳಿ ವೃತ್ತಕ್ಕೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಓಲ್ಡ್ ರಸ್ತೆಯ ಮೂಲಕ ಕಂಕನಾಡಿ ಜಂಕ್ಷನ್‌ಗೆ ಬಂದು ಬಲಕ್ಕೆ ತಿರುಗಿ ಕರಾವಳಿ ವೃತ್ತದ ಕಡೆಗೆ ಸಂಚರಿಸಬೇಕು.

ಫನ್ನೀ‌ರ್ ರಸ್ತೆಯಿಂದ ಹಾಗೂ ವೆಲೆನ್ಸಿಯಾ ರಸ್ತೆಯಿಂದ ಪಂಪ್‌ವೆಲ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಜಂಕ್ಷನ್‌ನಿಂದ ನೇರವಾಗಿ ಕರಾವಳಿ ಜಂಕ್ಷನ್‌ಗೆ ಬಂದು ಬಲಕ್ಕೆ ತಿರುಗಿ ಪಂಪ್‌ ವೆಲ್ ವೃತ್ತದ ಕಡೆಗೆ ಸಂಚರಿಸಬೇಕು ಎಂದು ನಗರ ಪೋಲಿಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…

2 minutes ago

ಉಡುಪಿ: ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ ಸ್ವರೂಪ ಟಿ.ಕೆ. ಎಚ್ಚರಿಕೆ – vishwanews24

ಉಡುಪಿ : ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…

10 minutes ago

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ – vishwanews24

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…

24 minutes ago

ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ – vishwanews24

ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ ನವದೆಹಲಿ: ಇರಾನ್-ಅಮೆರಿಕ ಸಂಘರ್ಷದಿಂದ  ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ,…

35 minutes ago

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

19 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

19 hours ago