ಮಂಗಳೂರು: ನಗರದ ಪಂಪ್‌ವೆಲ್ ಬಸ್‌ನಿಲ್ದಾಣದ ಬಳಿ ನ.26 ರಂದು ಪತ್ತೆಯಾದ ನೋಟುಗಳ ಕಂತೆಯ ತಮಗೆ ಸೇರಿದ್ದೆಂದು ಹೇಳಿಕೊಂಡು ಮೂವರು ಬಂದಿದ್ದಾರೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಮೂವರು ಹಣ ತಮ್ಮದು ಎಂದು ಹೇಳಿಕೊಂಡಿದ್ದು ಅವರಲ್ಲಿ ಯಾರೂ ಅದನ್ನು ಸಾಬೀತುಪಡಿಸಲು ಯಾವುದೇ ಪೂರಕಪುರಾವೆಗಳನ್ನು ಒದಗಿಸಿಲ್ಲ ಎಂದು ಅವರು ಹೇಳಿದ್ದಾರೆ.
ನವೆಂಬರ್ 26 ರಂದು ಪಂಪ್‌ವೆಲ್ ಬಸ್ ನಿಲ್ದಾಣದ ಬಳಿ ಸ್ಥಳೀಯ ನಿವಾಸಿಗಳಾದ ಶಿವರಾಜ್ ಮತ್ತು ತುಕಾರಾಂ ಅವರಿಗೆ ನೋಟುಗಳ ಬಂಡಲ್ ಸಿಕ್ಕಿದ್ದು, ಅವರು ತಮ್ಮ ನಡುವೆ ಹಣವನ್ನು ಹಂಚಿಕೊಂಡಿದ್ದಾರೆ. ನಂತರ ಶಿವರಾಜ್ ಅವರ ಶರ್ಟ್ ಜೇಬಿನಲ್ಲಿ ನೋಟುಗಳ ಕಂತೆ ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಶಿವರಾಜ್ ಅವರನ್ನು ವಶಕ್ಕೆ ಪಡೆದು 49 ಸಾವಿರ ರೂ. ವಶಕ್ಕೆ ಪಡೆದಿದ್ದರು. ಮಾಧ್ಯಮಗಳಲ್ಲಿ ಈ ವಿಷಯ ವರದಿಯಾದಾಗ ತುಕಾರಾಂ ತನ್ನ ಬಳಿಯಿದ್ದ 2.99 ಲಕ್ಷ ರೂಪಾಯಿಯನ್ನು ತನ್ನ ಕುಟುಂಬ ಸದಸ್ಯರ ಮೂಲಕ ಠಾಣೆಗೆ ಹಿಂದಿರುಗಿಸಿದ್ದರು. ಆದರೆ ಹಣದ ಮೂಲವನ್ನು ಮತ್ತು ಬಂಡಲ್ ನಲ್ಲಿದ್ದ ಒಟ್ಟು ಮೊತ್ತವನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ.
ಇನ್ನು ಹಣ ತಮ್ಮದೆನ್ನುವುದನ್ನು ನ್ಯಾಯಾಲಯದಲ್ಲಿಯೇ ಸಾಬೀತುಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ವ್ಯಕ್ತಿಗಳಿಗೆ ಸೂಚಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…