ಮಂಗಳೂರು : ಪಂಪ್ ವೆಲ್ ನಲ್ಲಿ ಇತ್ತೀಚೆಗೆ ಪತ್ತೆಯಾದ ಲಾಕ್ ಡೌನ್ ಬೇಕು ಹಾಗೂ ಇತರ ಕೆಲವು ಆಕ್ಷೇಪಾರ್ಹ ಸಂದೇಶಗಳಿದ್ದ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ.
ಇವರು ನಗರದ ಕಾಲೇಜೊಂದರ ವಿದ್ಯಾರ್ಥಿಗಳು. ಲಾಕ್ ಡೌನ್ ಆದರೆ ಎಕ್ಸಾಮ್ ಮುಂದಕ್ಕೆ ಹೊಗುತ್ತದೆ ಎಂಬ ಉದ್ದೇಶದಿಂದ ಬರೆದಿದ್ದೇವೆ ಎಂಬುದಾಗಿ ಆರೋಪಿಗಳು ಹೇಳಿದ್ದಾರೆ. ಇದರ ಹಿಂದೆ ಬೇರೆ ಯಾರಾದರೂ ಇದ್ಧಾರೆಯೆ ಎಂಬ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಕರ್ನಾಟಕ ಬ್ಯಾಂಕ್ ಹೆಡ್ ಆಫೀಸ್ ಮುಂಭಾಗದಲ್ಲಿರುವ ಪಂಪವೆಲ್ ಫ್ಲೈ ಓವರ್ ಗೋಡೆ ಮೇಲೆ ಅವಹೇಳನಕಾರಿ ಪದ ಹಾಗೂ ಲಾಕ್ ಡೌನ್ ಬೇಕಾಗಿದೆ ಎನ್ನುವ ಬರಹವನ್ನು ಕೆಂಪು ಬಣ್ಣದಲ್ಲಿ ದೊಡ್ಡದಾಗಿ ಬರೆದಿರುವುದು ಏ.20ರ ಮಂಗಳವಾರ ಮುಂಜಾನೆ ಪತ್ತೆಯಾಗಿತ್ತು. ಈ ಸಂಬಂಧ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಸಾಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…