ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಬರಬಾರದು ಎಂಬ ಸಿದ್ಧಾಂತವನ್ನು ಪ್ರತಿಪಾದಿಸುತ್ತಾ ಸಹಕಾರಿಗಳೆಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿಕೊಂಡಿರುವ ಸಹಕಾರಿ ಕ್ಷೇತ್ರದ ನಾಯಕರಾದ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರು ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಿಂದ ದೂರ ಸರಿದಿದ್ದಾರೆ.
ಸಹಕಾರಿ ಕ್ಷೇತ್ರದ ಪ್ರಮುಖರ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರೆಲ್ಲರ ಆಶಯ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಹಕಾರಿ ಕ್ಷೇತ್ರದಲ್ಲಿ ಪಕ್ಷಾತೀತ ನಾಯಕರಾಗಿ ಉಳಿಯಬೇಕು, ರಾಜಕೀಯ ಪ್ರವೇಶದಿಂದ ಸಹಕಾರಿಗಳೆಲ್ಲರಿಂದ ದೂರ ಉಳಿಯುವ ಸಾಧ್ಯತೆ ಇರುವುದರಿಂದ ಅವರು ಸಹಕಾರಿ ನಾಯಕರಾಗಿಯೇ ಇರಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಅವರು ಸ್ಪರ್ಧಾಕಣದಿಂದ ದೂರಸರಿಯಲು ನಿರ್ಧರಿಸಿದ್ದಾರೆ.
ಸಹಕಾರಿಗಳೆಲ್ಲರ ಆಶಯದಂತೆ ಅವರು ಈ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಪ್ರವೇಶ ಮಾಡುವುದಿಲ್ಲ. ಸಹಕಾರ ಕ್ಷೇತ್ರದಿಂದಲೇ ತಾನು ಗುರುತಿಸಿಕೊಳ್ಳಬೇಕು ಹಾಗೂ ಸಹಕಾರ ಕ್ಷೇತ್ರಕ್ಕೆ ತನ್ನಿಂದಾದ ಉತ್ತಮ ಕೆಲಸವನ್ನು ಮುಂದುವರಿಸುವ ಉದ್ದೇಶ ಅವರಲ್ಲಿದೆ. ಹಾಗಾಗಿ ಸಹಕಾರಿಗಳ ಆಶಯಕ್ಕೆ ಸ್ಪಂದಿಸುವ ಉದ್ದೇಶದಿಂದ ಅವರು ವಿಧಾನ ಪರಿಷತ್ ಚುನಾವಣಾ ಪ್ರಕ್ರಿಯೆಯಿಂದ ಹಿಂದೆ ಸರಿದಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…