ಮಂಗಳೂರು: ಪಠ್ಯಪುಸ್ತಕ ಮರು ಪರಿಷ್ಕರಣೆ ವೇಳೆ ನಾರಾಯಣ ಗುರುಗಳ ಹೆಸರನ್ನು ಕೈ ಬಿಟ್ಟಿರುವುದು ದಾರ್ಶನಿಕನಿಗೆ ಮಾಡಿದ ಅಪಮಾನವಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಅಭಿಪ್ರಾಯ ಪಟ್ಟರು.
ಶುಕ್ರವಾರ ಇಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಾಯಣ ಗುರುಗಳ ಹೆಸರನ್ನು ಪಠ್ಯ ಪುಸ್ತಕದಿಂದ ಕೈ ಬಿಡಲಾಗಿದೆ ಎಂಬುದು ಕಾಂಗ್ರೆಸ್ ನ ಅಪಪ್ರಚಾರ ಎಂದು ಕೆಲವರು ಹೇಳುತ್ತಿದ್ದಾರೆ.
ಆದರೆ, ಈ ಬಗ್ಗೆ ಮಾಧ್ಯಮದವರು, ಚಿಂತಕರು ಮೊದಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಹೆಚ್ಚು ಇದ್ದಾರೆ. ಇವರದೇ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದೇ ಜಿಲ್ಲೆಯವರಾಗಿದ್ದಾರೆ. ಇಂತಹ ಪ್ರಮಾದ ನಡೆದಿದ್ದರೆ ಈ ಇಬ್ಬರು ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪರಧರ್ಮ ಸಹಿಷ್ಣುತೆ, ಸರ್ವ ಜನಾಂಗದ ಶಾಂತಿಯ ತೋಟ ಆಗಿರುವ ಕರ್ನಾಟಕದಲ್ಲಿ ಸಾಮರಸ್ಯ ಕ್ಕೆ ಕುಂದು ತರುವ ವಿಚಾರವನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವುದು ಘೋರ ಅಪರಾಧವಾಗಿದೆ. ಗಾಂಧೀಜಿ ಹತ್ಯೆ ಮಾಡಿರುವ ನಾಥೂರಾಮ ಗೋಡ್ಸೆ ಬಗ್ಗೆಯಾಗಲಿ, ಹೆಡಗೇವಾರ್ ಬಗ್ಗೆಯಾಗಲಿ ಬಿಜೆಪಿಯವರು ವೇದಿಕೆಯಲ್ಲಿ ಮಾತನಾಡಿಕೊಳ್ಳಲಿ. ಆದರೆ ಸಣ್ಣಮಕ್ಕಳು ಓದುವ ಪಠ್ಯದಲ್ಲಿ ಇಂತಹ ವಿಚಾರ ಸೇರಿಸುವುದರ ಹಿಂದೆ ದುರುದ್ದೇಶ ಇದೆ ಎಂದು ಆರೋಪಿಸಿದರು.
ಈ ಹಿಂದೆ ಗಣರಾಜ್ಯೋತ್ಸವ ದ ಪರೇಡ್ ನಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರವನ್ನು ಸರ್ಕಾರ ಕೈ ಬಿಟ್ಟಿತ್ತು. ಈಗ ಪಠ್ಯದಲ್ಲಿ ಇವರ ವಿಚಾರ ಕೈ ಬಿಟ್ಟಿರುವುದು ಹಿಂದುಳಿದವರಿಗೆ ಮಾತ್ರವಲ್ಲ, ಇಡೀ ಮಾನವ ಸಮಾಜಕ್ಕೆ ಮಾಡಿದ ಅವಮಾನವಾಗಿದೆ. ಬಿಜೆಪಿ ಹಿಂದುಳಿದ ವರ್ಗಗಳ ವಿರೋಧಿ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…