ಮಂಗಳೂರು:  ಪಣಂಬೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ; ಮೂವರು ಸ್ಥಳದಲ್ಲೇ ಮೃತ್ಯು – vishwanews24

Featured, ದಕ್ಷಿಣ ಕನ್ನಡ

ಮಂಗಳೂರು:  ಪಣಂಬೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ; ಮೂವರು ಸ್ಥಳದಲ್ಲೇ ಮೃತ್ಯು

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.

ಪಣಂಬೂರು ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ.

ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ : ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ – vishwanews24

ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದೆ.

ಈ ವೇಳೆ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಾರ್ಕಳ: ಮೊಬೈಲ್‌ ಕೊಡಿಸಿಲ್ಲವೆಂದು ನೀರಿಗೆ ಹಾರಿ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಡಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply